ಕಲಬುರಗಿ: ನಗರದಲ್ಲಿ ಕೊರೋನಾ ಸೋಂಕು ಹರಡಿರುವ ಹಿನ್ನೆಲೆ ಲಾಕ್ ಡೌನ್, 144 ಸೆಕ್ಷನ್ ಜಾರಿಯಲ್ಲಿರುವುದರಿಂದ ನಗರದ ಜನತೆ, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ತೊಂದರೆ ಉಂಟಾಗುತಿತ್ತು. ಇದನ್ನು ಅರಿತ ಮಹಾನಗರ ಪಾಲಿಕೆ, ಯುನೈಟೆಡ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದೆ.
ಮಹಾನಗರ ಪಾಲಿಕೆಯು ನಗರದ ವಿವಿಧ ಬಡಾವಣೆಗಳಲ್ಲಿ ಸ್ಥಾಪಿಸಿರುವ ಈ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಗರದ ಸಾರ್ವಜನಿಕರು ಹಾಗೂ ಗರ್ಭಿಣಿ ಮಹಿಳೆಯರು ಮತ್ತು ಇನ್ನಿತರರು ಯಾವುದೇ ಆರೋಗ್ಯ ತಪಾಸಣೆಯನ್ನು, ರಕ್ತ ಪರೀಕ್ಷೆ ಹಾಗೂ ಔಷಧಿಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಇಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿ ಇಲ್ಲಿದೆ.
- ಮಹಾನಗರ ಪಾಲಿಕೆಯ ಹೊಸ ಕಟ್ಟಡ. (ಇಲ್ಲಿ ಟೆಲಿ ಮೆಡಿಷನ್ ಸೌಲಭ್ಯದ ಮೂಲಕ ವಿಡಿಯೋ ಕಾಲ್ ಮುಖಾಂತರ ಆರೋಗ್ಯ ಸೇವೆ ಪಡೆಯಬಹುದು. ನಂ-8310964779, ಹಾಗೂ ತುರ್ತು ವಾಹನದ ಸೌಲಭ್ಯವನ್ನು ಕಲ್ಪಿಸಲಾಗಿದೆ)
- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಾರಫೈಲ್.
- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಹ್ಮಪೂರ ಕೃಷ್ಣ ನಗರ, ಬೊರಬಾಯಿ ನಗರ.
- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಂದರ ನಗರ.