ಆಳಂದ: ಉದ್ಯೋಗ ಅರಿಸಿ ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಶೀಘ್ರವಾಗಿ ವಾಪಸ ಕರೆ ತರುವ ವ್ಯವಸ್ಥೆ ಮಾಡಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮಾಡಿದ ಮನವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮೌಖಿಕ ಒಪ್ಪಿಗೆ ಸೂಚಿಸಿದ್ದಾರ.
ಆಳಂದ ತಾಲೂಕಿನಿಂದ ಸುಮಾರು 17 ಸಾವಿರಕ್ಕೂ ಹೆಚ್ಚು ಜನ ಉದ್ಯೋಗ ಅರಿಸಿ ಮುಂಬೈ, ಪುಣೆ ನಗರಗಳಿಗೆ ವಲಸೆ ಹೋಗಿದ್ದಾರೆ ಅವರ ಯೋಗಕ್ಷೇಮ ಕಾಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿಎಂ ಯಡಿಯೂರಪ್ಪನವರಿಗೆ ಮನವರಿಕೆ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಇದರ ಕುರಿತು ಎರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.