ಶಹಾಬಾದ: ಹೊನಗುಂಟಾ ಗ್ರಾಮ ಪಂಚಾಯತಿಯಲ್ಲಿ ಜಾಬ್‍ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ ನರೇಗಾಯೋಜನೆಯಡಿ ಕೆಲಸ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ನೇತೃತ್ವದಲ್ಲಿ ಶುಕ್ರವಾರ ಗ್ರಾಪಂ ಪಿಡಿಓ ಅವರಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಅಶೋಕ ಮ್ಯಾಗೇರಿ, ಶಹಾಬಾದ ತಾಲೂಕಿನ ಮೂರು ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪ್ರಾರಂಭವಾಗಿದೆ.ಆದರೆ ಹೊನಗುಂಟಾ ಗ್ರಾಪಂಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಇನ್ನೂ ಕೆಲಸ ಪ್ರಾರಂಭಿಸಿಲ್ಲ. ಈಗಾಗಲೇ ಜಾಬ್‍ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ ಜಾಬ್‍ಕಾರ್ಡ ಮಾಡಿಲ್ಲ.ಅಲ್ಲದೇ ಕೆಲಸಕ್ಕೂ ತೆಗೆದುಕೊಂಡಿಲ್ಲ. ಲಾಕ್‍ಡೌನ್ ಆಗಿದ್ದರಿಂದ ಬಡಕೂಲಿ ಕಾರ್ಮಿಕರು ಇತ್ತ ಆಹಾರವಿಲ್ಲದೆ ಹಾಗೂ ಕೆಲಸವಿಲ್ಲದೇ ಪರದಾಡುತ್ತಿದ್ದಾರೆ.
ಅವರಿಗೆ ಕೆಲಸ ಕೊಡದೇ ಗ್ರಾಪಂ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕೂಲಿ ಕಾರ್ಮಿಕರಿಗೆ ಕೆಲಸ ನೀಡದಿದ್ದರೇ ಮೇ 11 ರಂದು ಬೆಳಿಗ್ಗೆ 11 ಗಂಟೆಯಿಂದ 11:30ವರೆ ಗಂಟೆಯವರೆಗೆ ಕೂಲಿ ಕಾರ್ಮಿಕರು ತಮ್ಮ ತಮ್ಮ ಮನೆಯ ಮುಂದೆ ತಟ್ಟೆ ತಟ್ಟುವ ಮೂಲಕ ಪ್ರತಿಭಟನೆ ಮಾಡುತ್ತಾರೆ.ಕೂಡಲೇ ಬಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿದರು.
ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಶಿವಕುಮಾರ ಬುರ್ಲಿ, ಸಾಯಿಬಣ್ಣ ಇಜೇರಿ, ಕಾಶಿನಾಥ.ಎಮ್, ಅರುಣಕುಮಾರ, ಶಂಕರ ಭಜಂತ್ರಿ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…