ಮುಧೋಳ : ಸಂಕಷ್ಟದಲ್ಲಿರುವ ಕಂಬಳಿ ನೇಕಾರರಿಗೆ ಹತ್ತು ಸಾವಿರ ರೂ.ಗಳ ಪ್ಯಾಕೇಜ್ ಘೋಷಿಸಿ ಎಂದು ಹಾಲುಮತ ಮಹಾಸಭಾದ ಸಂಚಾಲಕರಾದ ಕುಮಾರ ಅರಕೇರಿ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಕೊರೊನಾ ಹರಡದಂತೆ ಇಡೀ ರಾಷ್ಟ್ರದಲ್ಲಿ ಲಾಕ್ ಡೌನ್ ಮಾಡಿರುವ ಹಿನ್ನೆಲೆ ಕಳೆದ 40 ಕ್ಕೂ ಹೆಚ್ಚು ದಿನಗಳಿಂದ ಕಂಬಳಿ ನೇಕಾರರು , ಉದ್ಯಮದವರು ಮಾರಾಟಕ್ಕೆ ಅವಕಾಶ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿಗಳು ಕಂಬಳಿ ನೇಕಾರರ ನೆರವಿಗೆ ಧಾವಿಸಬೇಕು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಟ್ಟೆ, ರೇಷ್ಮೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ಲಕ್ಷಾಂತರ ಕಂಬಳಿ ನೇಕಾರರು ಇದ್ದರು ಇವರನ್ನು ಕಡೆಕಣಿಸಿದ್ದಾರೆ. ತೀವ್ರ ಸಂಕಷ್ಟ ಎದುರಿಸುತ್ತಿರುವ ಕಂಬಳಿ ನೇಕಾರರ ಸಾಲ ಮನ್ನಾ ಮಾಡಿ, ಶೂನ್ಯ ಬಡ್ಡಿ ದರದಲ್ಲಿ ಒಂದು ಲಕ್ಷ ರೂ ವರೆಗೆ ಸಾಲ ಸೌಲಭ್ಯವನ್ನು ನೀಡಬೇಕೆಂದು ಅವರು ಮಾಡುತ್ತಿದ್ದಾರೆ.
ಇತರೆ ನೇಕಾರರಿಗೆ ನೀಡಿದ ಪ್ರಾಮುಖ್ಯತೆಯನ್ನು ಕಂಬಳಿ ನೇಕಾರರಿಗೂ ನೀಡುವಂತೆ ರಾಜ್ಯದ ಕಂಬಳಿ ನೇಕಾರರ ಪರವಾಗಿ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
ಸೂಪರ್ ಮಾಡಬೇಕು