ಕಲಬುರಗಿ: ಕಾಯಕ ವೃತ್ತಿಯ ದರ್ಜಿಗಳು, ಅಕ್ಕಸಾಲಿಗರು, ಬಡಿಗರು, ಕಮ್ಮಾರರು, ಕುಂಬಾರರು ಹೂ ಕಟ್ಟುವವರು, ಸೇರಿದಂತೆ ಇನ್ನಿತರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ಜಿಲ್ಲಾಧ್ಯಕ್ಷ ರವಿ ಎನ್. ದೇಗಾಂವ ಅವರು ತಿಳಿಸಿದ್ದಾರೆ.
ದೇಶದಲ್ಲಿ ಮಹಾಮಾರಿ ಕರೋನಾ ಕಾರಣದಿಂದಾಗಿ ಕಳೆದ ೪೫ ದಿನಗಳಿಂದ ಜನ ಜೀವನ ಅಸ್ಥವ್ಯಸ್ತಗೊಂಡಿದೆ. ಲಕ್ಷಾಂತರ ಜನ ದಿನಗೂಲಿ ಉದ್ಯೋಗ ಮಾಡಿಕೊಂಡೆ ಜೀವನ ನಡೆಸುತ್ತಿರುವವರ ಜೀವನ ಕಷ್ಟಕರವಾಗಿದೆ ಆದ್ದರಿಂದ ಕಾಯಕ ವೃತ್ತಗಳಿಗೆ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್‌ನ್ನು ಘೋಷಿಸಬೇಕೆಂದರು.
ರಾಜ್ಯದ ವೃತ್ತಿಪರ ಶ್ರಮಿಕ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ನೀಡಿರುವುದು ಅತ್ಯಂತ ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ. ಈ ಕ್ರಮಕ್ಕೆ ಕರ್ನಾಟಕ ನವನಿರ್ಮಾಣ ಸೇನೆ ಕಲಬುರಗಿ ಜಿಲ್ಲಾ ಘಟಕವು ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದರು.
ಅದೇ ರೀತಿಯಾಗಿ ಕಾಯಕ ವೃತ್ತಿಯವರಾದ ದರ್ಜಿಗಳು (ಬಟ್ಟೆ ಹೊಲೆಯುವವರು) ಅಕ್ಕಸಾಲಿಗರು, ಬಡಿಗರು, ಕಮ್ಮಾರರು, ಕುಂಬಾರರು, ಹೂ ಕಟ್ಟುವವರು, ಸೇರಿದಂತೆ ಇತರರಿಗೂ ಸಹಿತ ವಿಶೇಷ ಪ್ಯಾಕೇಜ್ ನೀಡುವುದರ ಮೂಲಕ ಸರ್ಕಾರ ಅವರ ಬೆನ್ನಿಗೆ ನಿಲ್ಲಬೇಕೆಂದು ಸೇನೆ ಒತ್ತಾಯಿಸುತ್ತದೆ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…