ಬಿಸಿ ಬಿಸಿ ಸುದ್ದಿ

ಮುಧೋಳ ಸರ್ಕಲ್‌ ಇನ್ಸ್‌ಪೆಕ್ಟರ್, ಅವರಿಂದ ಮುಸ್ಲಿಂ ಸಮುದಾಯಕ್ಕೆ ನಿಂದನೆ: ದೂರು

ಸೇಡಂ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುಲು ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಜೀವ ಮತ್ತು ಕುಟುಂಬದ ಹಂಗು ತೊರೆದು ಕಣ್ಣಿಗೆ ನಿದ್ದೆ ಇಲ್ಲದೇ ಹಗಲಿರುಳು ಕರ್ತವ್ಯ ನಿರ್ವಹಿಸಿ ಎಲ್ಲರ ಪ್ರಾಣವನ್ನು ಕಾಪಾಡಲು ಶ್ರಮಿಸುತ್ತಿದ್ದಾರೆ.

ಆದರೆ ಇಲ್ಲಿನ ತಾಲ್ಲೂಕಿನ ಮುಧೋಳ ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ಜಾತಿ ನಿಂದನೆ ಮಾಡಿದ್ದಾರೆಂದು ಠಾಣೆ ವ್ಯಾಪ್ತಿಯ ನಿವಾಸಿ ಓರ್ವರು ಸಹಾಯಕ ಆಯುಕ್ತರಿಗೆ ದೂರು ನೀಡಿದ್ದಾರೆ.

ಮಹಮ್ಮದ್ ಹಸನ ಮದನಾ ಎಂಬ ವ್ಯಕ್ತಿ ಮದ್ಯ ಕುಡಿದು ಕುಡಿದು ಬಿದ್ದಿದ್ದ ರಿಂದ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದರು. ಠಾಣೆಯ ಪಿಸಿ ನಿಸಾರ್ ಅಹಮದ್ ಅವರಿಗೆ ಕರೆ ಮಾಡಿ ಹಸನ ಅವರಿಗೆ ಠಾಣೆಯಿಂದ ಕರೆದುಕೊಂಡು ಹೋಗಿ ಎಂದು ತಿಳಿಸಿದರು.

ಸರ್ಕಲ್ ಇನ್ಸ್‌ಪೆಕ್ಟರ್ ಠಾಣೆಯಲ್ಲಿ ಅಮಾಯಕರ ಜೊತೆ ನಡೆಸಿರುವ ವರ್ತನೆ ಖಂಡನೀಯವಾಗಿದೆ, ಈ ಕುರಿತು ಎಸ್.ಪಿ ಯಡಾ ಮಾರ್ಟಿನ್‌ ಮಾಹಿತಿ ಪಡೆದು ಕ್ರಮ ಕೈಗೋಳುವ ಭರವಸೆ ನೀಡಿದ್ದಾರೆ. – ಡಾ. ಅಜಗರ್ ಚುಲಬುಲ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ.

ಠಾಣೆಯಲ್ಲಿ ಮಹಮ್ಮದ್ ಮೋಯಿನರನ್ನು ನೋಡಿದ್ದು, ಮುಧೋಳ ಸರ್ಕಲ್ ಇನ್ಸ್‌ಪೆಕ್ಟರ್ ಅವಚ್ಯ ಶಬ್ದಗಳಿಂದ ನಿಂದಿಸಿ, ಮುಸ್ಲಿಂ ಸಮುದಾಯದಿಂದ ಕೊರೋನಾ ಮಹಾಮಾರಿ ಹಬ್ಬಿದೆ ಎಂದು ಅವಾಜ ಹಾಕಿ ಜಾತಿ ನಿಂದನೆ ಮಾಡಿದ್ದರೆ ಎಂದು ದೂರು ನೀಡಿ, ಇ-ಮೀಡಿಯಾ ಲೈನ್ ಜೊತೆ ಹಂಚಿಕೊಂಡಿದ್ದಾರೆ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

20 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago