ಬಿಸಿ ಬಿಸಿ ಸುದ್ದಿ

ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ನಿರ್ದೇಶಕರಿಂದ ಫುಡ್ ಕಿಟ್ ವಿತರಣೆ

ನಾಗಮಂಗಲ: ದೇಶದಾದ್ಯಂತ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಮೂರನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಕಾರ್ಮಿಕರು ಮತ್ತು ಬಡವರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ತಾಲ್ಲೂಕುನಾ ನ್ಯಾಷನಲ್ ಸ್ಕೂಲ್ ವತಿಯಿಂದ ಬಡವರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಚಾಲನೆ ನೀಡಿದರು.

ಪಟ್ಟಣದ ಮಂಡ್ಯ ರೋಡ್ ನಲ್ಲಿರುವ ನ್ಯಾಷನಲ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದು ದಿನಸಿ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ಬಡವರು,ನಿರ್ಗತಿಕರು ಸೇರಿದಂತೆ ಮುಖ್ಯಾವಾಹಿನಿಯಿಂದ ದೂರವಿರುವ ವ್ಯಕ್ತಿಗಳನ್ನು ಗುರ್ತಿಸಿ ನ್ಯಾಷನಲ್ ಸ್ಕೂಲ್ ಟ್ರಸ್ಟ್ ವತಿಯಿಂದ ಸಹಾಯ ಮಾಡಿತ್ತಿದೆ. ಲಾಕ್ ಡೌನ್‌ ಆಗಿರುವುದರಿಂದ ನಿಜವಾದ ಸಮಸ್ಯೆ ಎದುರಿಸುತ್ತಿರುವವರು ಅಂಗವಿಕಲರು,ಬಡವರು ಮತ್ತು ಕಾರ್ಮಿಕರು. ಅಂತಹ ನಿಜವಾದ ಸಮಸ್ಯೆ ಇರುವವರನ್ನು ಗುರ್ತಿಸಿ ದಿನಸಿ ಕಿಟ್ ವಿತರಿಸುವ ಸಮಾಜಮುಖಿ ಕೆಲಸ ಮಾಡುತ್ತಿರುವುದು ನಿಜವಾಗಯೂ ಶ್ಲಾಘನೀಯ.ಜನರ ಸೇವೆಯೇ ನಿಜವಾದ ದೇವರ ಸೇವೆಯಾಗಿದೆ.ಅಂತಹ ಕೆಲಸ ಮಾಡುತ್ತಿರುವ ಮುತೀಭ್ ಉರ್ ರೆಹಮಾನ್..ನ್ಯಾಷನಲ್ ಸ್ಕೂಲ್ ಸಂಸ್ಥಾಪಕರಿಂಗೆ
ಧನ್ಯವಾದಗಳು ಎಂದರು.

ನ್ಯಾಷನಲ್ ಸ್ಕೂಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನಲ್ಲಿ ಇರುವ ಅತಿ ಬಡವರ ಪಟ್ಟಿಯನ್ನು ತಯಾರಿಸಿ,ನಂತರ ಪರಿಶೀಲನೆ ನಡೆಸಿ ‌ಅಗತ್ಯ ಇರುವವರಿಗೆ ವಿತರಣೆ ಮಾಡುವ ಕೆಲಸ ಮಾಡುತ್ತಿದೆ. ಸುಮಾರು1000 ಬಡ‌ ಕುಟುಂಬಗಳಿಗೆ ಲಾಕ್ ಡೌನ್ ದಿನದಿಂದ ದಿನಸಿ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನ್ಯಾಷನಲ್ ಸ್ಕೂಲ್ ಆಡಳಿತ ಮಂಡಳಿ, ಮುತೀಭ್ ಉರ್ ರೆಹಮಾನ್ ಅಭಿಮಾನಿ ಬಳಗದವರು, ಗೋವಿಂದ ಮತ್ತು ಎಲ್ಲಪ್ಪನವರು ಭಾಗವಹಿಸಿದ್ದರು.

  • ದೇ.ರಾ .ಜಗದೀಶ ನಾಗಮಂಗಲ
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago