ಬಿಸಿ ಬಿಸಿ ಸುದ್ದಿ

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ವಿಧಿವಶ

ಸುರಪುರ: ರಾಯಚೂರು ಲೋಕಸಭಾದ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ರವಿರವಾರ ರಾತ್ರಿ ಸುರಪುದಲ್ಲಿನ ಅವರ ಸ್ವಗೃಹ ವಸಂತ ಮಹಲ್‌ನಲ್ಲಿ ನಿಧನರಾಗಿದ್ದಾರೆ.

61 ವಯಸ್ಸಿನ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು.ಮೃತರಿಗೆ ಒಬ್ಬ ಪುತ್ರ ರಾಜಾ ರೂಪಕುಮಾರ ನಾಯಕ ಹಾಗೂ ಇಬ್ಬರು ಪುತ್ರಿಯರಿದ್ದು, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಕಿರಿಯ ಸಹೋದರ ರಾಜಾ ಮೌನೇಶ್ವರ ನಾಯಕ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಸುರಪುರದ ರಾಜಕಾರಣದಲ್ಲಿ ತಮ್ಮದೆ ಆದ ಅಸ್ತಿತ್ವವನ್ನು ಹೊಂದಿದ್ದ ರಾಜಾ ರಂಗಪ್ಪ ನಾಯಕರು 24 ಮೇ 1959 ರಲ್ಲಿ ಜನಿಸಿದ್ದು,ಬಹುತೇಕ ಶಿಕ್ಷಣವನ್ನು ಹೈದರಾಬಾದ್‌ನಲ್ಲಿಯೆ ಮುಗಿಸಿದ್ದರು.ತಂದೆ ರಾಜಾ ಕುಮಾರ ನಾಯಕಕೂಡ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು,ಇವರ ಹಿರಿಯ ಸಹೋದರ ರಾಜಾ ವೆಂಕಟಪ್ಪ ನಾಯಕ ಕೂಡ ಶಾಸಕರಾಗಿದ್ದರು.

1987 ರಲ್ಲಿ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿ 87 ರಿಂದ 92ರ ವರೆಗೆ ಎಸ್.ಎಚ್ ಖಾನಾಪುರ ಮಂಡಲ್‌ನ ಪ್ರಧಾನರಾಗಿ ನಂತರ 1995 ರಲ್ಲಿ ಅಂದಿನ ಗುಲ್ಬರ್ಗ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡು 1996 ರಲ್ಲಿ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

1996ರ 11ನೇ ಲೋಕಸಭೆಗೆ ರಾಯಚೂರು ಲೋಕಸಭಾ ಕ್ಷೇತ್ರದಿಂದ ಅಂದಿನ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 2,14,920 ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸದರಾಗಿ ಸಂಸತ್ ಪ್ರವೇಶಿಸಿದರು.ದೇವೆಗೌಡರಿಗೆ ಆಪ್ತರಾಗಿದ್ದ ಇವರು ತಂದೆ ರಾಜಾ ಕುಮಾರ ನಾಯಕ ಹಾಗೂ ಅಣ್ಣಾ ರಾಜಾ ವೆಂಕಟಪ್ಪ ನಾಯಕರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು‌.

ಈ ಭಾಗದ ಪ್ರಭಾವಿ ರಾಜಕಾರಣಿಯ ನಿಧನದಿಂದ ಆಘಾತಗೊಂಡಿರುವ ಅನೇಕ ರಾಜಕೀಯ ಮುಖಂಡರು ಮತ್ತವರ ಅಭಿಮಾನಿಗಳು ರಾಜಾ ರಂಗಪ್ಪ ನಾಯಕರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago