ಬಿಸಿ ಬಿಸಿ ಸುದ್ದಿ

ಲಾಕ್‌ಡೌನ್ ಕಠಿಣ ಪರಿಸ್ಥಿತಿಯಲ್ಲಿಯೂ ದಾಸೋಹಕಾರ್ಯದಲ್ಲಿ ನಿರತ: ಮಾತೋಶ್ರೀ ಅವ್ವಾಜಿ

ಕಲಬುರಗಿ: ೧೮ನೇ ಶತಮಾನದ ಸಂತ ಶರಣಬಸವೇಶ್ವರರ ದಾಸೋಹ ಜೀವನ ಹಾಗೂ ಅವರು ರೂಪಿಸಿದ್ದ ದಾಸೋಹ ಸಂಸ್ಕೃತಿಯನ್ನು ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜೀ, ಮಾತೋಶ್ರೀ ದಾಕ್ಷಾಯಿಣಿ ಅವ್ವಾಜೀ, ಹಾಗೂ ೯ನೇ ಪೀಠಾಧಿಪತಿ ಚಿ.ಪೂಜ್ಯ ದೊಡ್ಡಪ್ಪ ಅಪ್ಪಾಜೀಯವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕೋವಿಡ್ -೧೯ ಮಾರಣಾಂತಿಕ ರೋಗ ಹರಡುವದನ್ನು ತಡೆಗಟ್ಟಲು ಸರ್ಕಾರದ ನಿಯಮವನ್ನು ಪಾಲಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಲಾಕ್‌ಡೌನ್ ಕಠಿಣ ಪರಿಸ್ಥಿತಿಯಲ್ಲಿಯೂ ಅಗತ್ಯವಿರುವರಿಗೆ ದಾಸೋಹಕಾರ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ಲಾಕ್‌ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿರುವುದಲ್ಲದೇ, ಹಸಿದ ಹೊಟ್ಟೆಗಳ ಪೋಷಣೆ ಹಾಗೂ ಅಗತ್ಯವಿರುವರಿಗೆ ಸಹಾಯ ಮಾಡುತ್ತ ಬಂದಿರುವ ಶತಮಾನೋತ್ಸವದತ್ತ ಸಾಗುತ್ತಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹವನ್ನು ನೀಡುತ್ತಿರುವ ಶ್ರೀಮಂತ ಸಂಪ್ರದಾಯ ಹೊಂದಿದ್ದ ಸಂಸ್ಥೆಯಾಗಿದೆ, ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಆನ್‌ಲೈನ್ ತರಗತಿ ನಡೆಸುವುದು ಮತ್ತು ಆನ್‌ಲೈನ್ ಪರೀಕ್ಷೆಯನ್ನು ನಡೆಸುದರೊಂದಿಗೆ ವಿಶಿಷ್ಟ ಸಂಸ್ಥೆ ಮತ್ತು ವಿಶ್ವವಿದ್ಯಾಲಯವಾಗಿದೆ.

ದೇವಸ್ಥಾನಕ್ಕೆ ದೇವರ ದರ್ಶನಕ್ಕೆಂದು ಆಗಮಿಸಿದ್ದವರೆಲ್ಲರನ್ನು ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿತ್ತು. ಕೋವಿಡ್ -೧೯ದಿಂದ ಸರ್ಕಾರ ಆದೇಶ ಹೊರಡಿಸಿದ್ದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ನಿಯಮದಿಂದಾಗಿ, ಪೂಜ್ಯ ಡಾ. ಅಪ್ಪಾಜಿ ಹಾಗೂ ಮಾತ್ರೋಶ್ರೀ ಅವ್ವಾಜೀಯವರು ಸಿಕ್ಕಿಬಿದ್ದ ವಲಸೆ ಕಾರ್ಮಿಕರು ದೈನಂದಿನ ಕೂಲಿಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡವರಿಗೆ ಆಹಾರ, ಮಾಸ್ಕ ಮತ್ತು ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿ, ಸಿಕ್ಕಿ ಬಿದ್ದ ವಲಸೆ ಕಾರ್ಮಿಕರು ಹಾಗೂ ತೊಂದರೆಯಲ್ಲಿರುವರ ವಾಸಸ್ಥಳಕ್ಕೆ ಶಾಲಾ ವಾಹನ ಸಾಗಿಸುವ ಮೂಖಾಂತರ ಆಹಾರದ ಪ್ಯಾಕೇಟ್ ನೀರು ಮಾಸ್ಕ್ ಸ್ಯಾನಿಟೈಸರ್ ಪೂರೈಸಲಾಗುತ್ತಿದೆ.

೧೮ನೇ ಶತಮಾನದ ಸಂತರಾದ ಶ್ರೀ ಶರಣಬಸವೇಶ್ವರರು ಆರಂಭಿಸಿದ್ದ ದಾಸೋಹ ಸಂಸೃತಿಯನ್ನು ಶರಣಬಸವೇಶ್ವರ ಸಂಸ್ಥಾನದ ಫೀಠಾಧಿಪತಿಗಳು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸಂಸ್ಥಾನದ ೭ನೇ ಪೀಠಾಧಿಪತಿಯಾಗಿದ್ದ ಪೂಜ್ಯ ಲಿಂಗೈಕ್ಯ ದೊಡ್ಡಪ್ಪ ಅಪ್ಪಾರವರು ಅನ್ನ ದಾಸೋಹದ ಜೊತೆಗೆ ೧೯೩೪ರಲ್ಲಿ ಮೊದಲ ಬಾರಿಗೆ ಬಾಲಕಿಯರ ಶಾಲೆ ಆರಂಭಿಸುವ ಮೂಲಕ ಶಿಕ್ಷಣ ದಾಸೋಹಕ್ಕೆ ನಾಂದಿಹಾಡುವ ಮೂಲಕ ಶಿಕ್ಷಣ ಸಂಸ್ಥೆಗಳ ಸರಪಳಿ ಪ್ರಾರಂಭಗೊಳ್ಳುವಿಕೆಗೆ ಕಾರಣಿಭೂತರಾದರು.

ಶರಣಬಸವೇಶ್ವರರ ಸಂಸ್ಥಾನದ ಶ್ರೀಮಂತ ಇತಿಹಾಸದಲ್ಲಿ ಮೊದಲ ಬಾರಿಗೆ ಮಾತೋಶ್ರೀ ದಾಕ್ಷಾಯಿಣಿ ಅವ್ವನವರು ವೈಯಕ್ತಿಕ ಆಸಕ್ತಿ ಹಾಗೂ ಸ್ವನೇತೃತ್ವದೊಂದಿಗೆ ದಾಸೋಹ ಸಂಸ್ಕೃತಿಯನ್ನು ಅಗತ್ಯವಿರುವರ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಆಹಾರ, ನೀರು ಇತರ ಅಗತ್ಯ ವಸ್ತುಗಳನ್ನು ಹಾಗೂ ಸಾವಿರಾರು ಹಸಿದ ಹೊಟ್ಟೆಯ ಹಸಿವನ್ನು ನೀಗಿಸುವ ಅವ್ವಾಜೀಯವರ ಕಾರ್ಯ ಶ್ಲಾಘನೀಯ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆ ಹಾಗೂ ಶರಣಬಸವ ವಿಶ್ವವಿದ್ಯಾಲಯ ಆನ್‌ಲೈನ್ ಮೂಲಕ ಶೈಕ್ಷಣಿಕ ಕಾರ್ಯ ಪರಿಪೂರ್ಣತೆ ಸಾಧಿಸಿಸುವದರ ಜೊತೆಗೆ ಆಂತರಿಕ ಪರೀಕ್ಷೆಯಲ್ಲಿಯೂ ಯಶಸ್ವಿಸಾಧಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago