ಕಲಬುರಗಿ: ಲಾಕ್ ಡೌನ್ ಹಿನ್ನೆಯಲ್ಲಿ ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಅದರಲ್ಲೂ ಕಲಬುರಗಿ ಜಿಲ್ಲೆಯ ಕೂಲಿ ಕಾರ್ಮಿಕರನ್ನು ವಾಪಸ್ ಜಿಲ್ಲೆಗೆ ತರುವಂತೆ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಸರಕಾರಕ್ಕೆ ಆಗ್ರಹಿಸಿ ಪತ್ರ ಬರೆದಿದ್ದರು.
ಹಾಗೆ ಕರೆತರುವ ಕಾರ್ಮಿಕರ ಸಾರಿಗೆ ವೆಚ್ಚವನ್ನು ಕಾಂಗ್ರೆಸ್ ವತಿಯಿಂದ ಭರಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹಾಗೂ ಎಂಡಿ NEKRTC ಅವರಿಗೆ ಪತ್ರ ಬರೆದು ಈ ಕೂಡಲೇ ಮಹಾರಾಷ್ಟ್ರ ಹಾಗೂ ಆಂದ್ರಪ್ರದೇಶಕ್ಕೆ ನೂರು ಬಸ್ ಮತ್ತು ಗೋವಾ ಹಾಗೂ ತೆಲಂಗಾಣಕ್ಕೆ ಐವತ್ತು ಬಸ್ ಬಿಡುವಂತೆ ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ NEKRTC ಎಂಡಿ ಅವರು ಜಿಲ್ಲಾಧಿಕಾರಿ ಕಲಬುರಗಿ ಅವರಿಗೆ ನಿರ್ದೇಶನ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. ಸದರಿ ಪತ್ರವನ್ನು ತಮ್ಮ ಟ್ವಿಟರ್ ನಲ್ಲಿ ನಮೂದಿಸಿರುವ ಶಾಸಕರು ತಾವು ಬರೆದ ಪತ್ರಕ್ಕೆ ಸರಕಾರ ಹಾಗೂ ಎಂಡಿ NEKRTC ಅವರ ಮನವಿಗೆ ಸ್ಪಂದಿಸುವಂತೆ ಅವರು ಆಗ್ರಹಿಸಿದ್ದಾರೆ.
ಈ ನಡುವೆ ಮತ್ತೊಂದು ಟ್ವಿಟ್ ಮಾಡಿರುವ ಶಾಸಕರು, ಸಂಸದರಾದ ಉಮೇಶ್ ಜಾಧವ್ ಅವರನ್ನು ಉದ್ದೇಶಿಸಿ ಕಾರ್ಮಿಕರನ್ನು ವಾಪಸ್ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ತಮಗೆ ಸಹಾಯ ಮಾಡುವಂತೆಯೂ ಅವರು ಕೋರಿದ್ದಾರೆ.
ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರಕಾರವಿದ್ದರೂ ಕೂಡಾ ವಲಸೆ ಹೋಗಿರುವ ಕಲಬುರಗಿ ಜಿಲ್ಲೆಯ ಕಾರ್ಮಿಕರನ್ನು ವಾಪಸ್ ಕರೆ ತರುವಲ್ಲಿ ಆಗುತ್ತಿರುವ ವಿಳಂಬ ಕುರಿತು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರೇ ಸ್ವತಃ ಸರಕಾರಕ್ಕೆ ಹಾಗೂ NEKRTC ಎಂ ಡಿ ಅವರಿಗೆ ಪತ್ರ ಬರೆದ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಲ್ಲಿ ಸಿಲುಕಿರುಗ ಕೂಲಿ ಕಾರ್ಮಿಕರನ್ನು ಹಾಗೂ ವಿದ್ಯಾರ್ಥಿಗಳನ್ನು ಬಸ್ ಗಳ ಮೂಲಕ ಕರೆದು ತರುವಂತೆ ಹಾಗೂ ಸಾರಿಗೆ ವೆಚ್ಚವನ್ನು ಕೆಪಿಸಿಸಿ ವತಿಯಿಂದ ಭರಿಸಲಾಗುವುದು ಎಂದು ಕೈ ಶಾಸಕರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದನ್ನು ಸ್ಮರಿಸಬಹುದಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…