ಕಲಬುರಗಿ: ವರ್ಷದ 12 ತಿಂಗಳವರೆಗೆ ಪ್ರತಿ ಕುಟುಂಬದ ತಲಾ ಸದಸ್ಯರಿಗೆ 15 ಕೆಜಿ ಪಡಿತರ ಧಾನ್ಯ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಬಿಪಿಎಲ್, ಎಪಿಎಲ್ ಎನ್ನುವ ತಾರತಮ್ಯವಿಲ್ಲದೆ ಕನಿಷ್ಟ ಒಂದು ವರ್ಷದ ಮಟ್ಟಿಗೆ ರೇಷನ್ ಕೊಡಬೇಕು. ಅಕ್ಕಿ, ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ಸೇರಿ 16 ಸಾಮಗ್ರಿಗಳನ್ನು ನೀಡಬೇಕು. ಇವುಗಳಿಗಿಂತ ಬಹುಮುಖ್ಯವಾಗಿ ಸೋಪು, ಸ್ಯಾನಿಟೈಸರ್, ಮಾಸ್ಕ್, ಮಹಿಳೆಯರಿಗೆ ನ್ಯಾಪ್ಕಿನ್ ಪ್ಯಾಡ್ ಒದಗಿಸಬೇಕು ಎಂದು ಆಗ್ರಹಿಸಿದರು.
ಡಾ. ಎಂ.ಎಸ್. ಸ್ವಾಮಿನಾಥನ ವರದಿ ಉತ್ಪಾದನಾ ವೆಚ್ಚಕ್ಕೆ ಶೇ.50 ಲಾಭಾಂಶ ಸೇರಿಸಿ ಭತ್ತ, ತೊಗರಿ, ಹತ್ತಿ, ಮೆಣಸಿನ ಕಾಯಿ, ಗೋವಿನ ಜೋಳ, ಶೇಂಗಾ ಮತ್ತಿತರರ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ತರಕಾರಿ, ಹಣ್ಣು ಇತ್ಯಾದಿ ಕೃಷಿ ಉತ್ಪನ್ನಗಳಿಗೆ ಟೋಲ್ ಫ್ರೀ, ಉಚಿತ ಸಾಗಾಣಿಕೆ ವೆಚ್ಚ, ಮಾರುಕಟ್ಟೆ ಶುಲ್ಕ ವಿನಾಯಿತಿ ನೀಡಬೇಕು. ಅಲ್ಲದೇ, ಸಂಕಷ್ಟದಲ್ಲಿರುವ ಎಲ್ಲ ರೈತರಿಗೆ ಕನಿಷ್ಠ 10 ಸಾವಿರ ಆರ್ಥಿಕ ನೆರವು ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಬೇಕು. ಕೃಷಿ ಸಾಲ, ಶೂನ್ಯ ಬಡ್ಡಿದರದಲ್ಲಿ ಸಾಲ ವಿಸ್ತರಿಸಬೇಕು. ರೇಷನ್, ಹಾಲು ಉತ್ಪಾದಕರು ಮತ್ತಿತರರ ಸಹಕಾರ ಸಂಘಗಳ ಮೂಲಕ ರಸಗೊಬ್ಬರ, ಕೀಟನಾಶಕ ಸರಬರಾಜು ಮಾಡಬೇಕು. ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಬಿಡಬೇಕು. ಅರಣ್ಯ ಹಕ್ಕಿನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು 75 ವರ್ಷಗಳ ದಾಖಲೆ ನೀಡುವ ವಿಚಾರ ಕೈಬಿಡಬೇಕು. ಎಪಿಎಂಸಿ ಕಾಯ್ದೆಗೆ ಸುಗ್ರಿವಾಜ್ಞೆ ಹೊರಡಿಸುವುದಕ್ಕೂ ತಡೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶಾಂತಪ್ಪ ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗ ಪಾಳಾ, ಮಲ್ಲನಗೌಡ, ಬನ್ನೆಪ್ಪ ಪೂಜಾರಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…