ಕಲಬುರಗಿ: ವಿಧವಾ ವೇತನ, ವೃಧ್ಯಾಪ ವೇತನ, ಸಂಧ್ಯಾ ಸುರಕ್ಷಾ ವೇತನವನ್ನು 4 ತಿಂಗಳಿನಿಂದ ಬಂದ್ ಆಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದು ನಿರ್ಗತಿರಿಗೆ ಒಂದೊತ್ತಿನ ಗಂಜಿಗೂ ಕೂಡ ಗತಿ ಇಲ್ಲದಂತಹ ಸ್ಥಿತಿ ಜಿಲ್ಲೆಯ ಮೊಘಾ ಗ್ರಾಮದಲ್ಲಿ ನಡೆದಿದೆ.
ಒಟ್ಟು 150 ಫಲಾನುಭವಿಗಳು ಇದ್ದು, ಹಿರಿಯ ನಾಗರಿಕರು ಜೀವಂತವಿದ್ದರೂ ಸಹ ಸತ್ತಿದ್ದಾರೆ ಎಂದು ಸುಳ್ಳು ವರದಿ ಹಾಕಿ ವೇತನವನ್ನು ಬಂದ್ ಮಾಡಿದ್ದಾರೆ ಎಂದು ಪಿಂಚಣಿದಾರರು ಕರ್ನಾಟಕ ಪ್ರಾಂತ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೇಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆರೋಪಿಸಿದ್ದಾರೆ.
ಪ್ರತಿ ತಿಂಗಳ ಪಿಂಚಣಿ ಹಣ ಬಂದ್ ಮಾಡಿ, ಕೇಳಲು ಹೋದರಿಗೆ ಅಧಿಕಾರಿ ಸಿಬ್ಬಂದಿಗಳು ಉಡಾಫೆ ಉತ್ತರ ನೀಡುತ್ತಿದ್ದಾರೆ ಪ್ರತಿಭಟನೆ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಕೊರೊನ ಎಫೆಕ್ಟನ್ನು ಬಡವರಿಗೆ, ನಿರ್ಗತಿಕರಿಗೆ ಕೂಲಿಕಾರ್ಮಿಕರು ಎದುರಿಸಿ ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಸರಕಾರದ ವಿರುದ್ಧ ಹಿಡಿಶಾಪ ಹಾಕುವ ವಾತವರಣ ನಿರ್ಮಾಣವಾಗಿದ್ದು, ಈ ಕೂಡಲೇ ಅಧಿಕಾರಿಗಳು ಮಧ್ಯಸ್ಥಿತಿಕೆ ವಹಿಸಿ ಫಲಾನುಭವಿಗಳಿಗೆ ಪಿಂಚಣಿ ಹಣ ಪಾವತಿಸಬೇಕೆಂದು ಮಮಶೇಟಿ ಈ ಸಂದರ್ಭದಲ್ಲಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗುರುನಂದೇಶ ಕೊಣಿನ, ತುಕಾರಾಮ ಮೋಘಾ, ಗುರುಲಿಂಗಪ್ಪಾ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…