ಬಿಸಿ ಬಿಸಿ ಸುದ್ದಿ

ಯಾದಗಿರಿ: ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ: ಜಿಲ್ಲೆಯಾದ್ಯಂತ 144 ಜಾರಿ

ಯಾದಗಿರಿ: ಗುಜರಾತ್‍ನ ಅಹಮದಾಬಾದ್ ನಗರದಿಂದ ಹಸಿರು ವಲಯದಲ್ಲಿದ್ದ ಯಾದಗಿರಿ ಜಿಲ್ಲೆಗೆ ಆಗಮಿಸಿರುವ 2 ಜನರಲ್ಲಿ ಕೋವಿಡ್-19 ಪಾಸಿಟಿವ್ ವರದಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರಪುರ ತಾಲ್ಲೂಕಿನ 3 ಜನ ಗುಜರಾತ್ ರಾಜ್ಯದ ಅಹಮದಾಬಾದ್ ನಗರಕ್ಕೆ ಮಾರ್ಚ್ ತಿಂಗಳಲ್ಲಿ ತೆರಳಿರುತ್ತಾರೆ. ಇವರು ಲಾಕ್‍ಡೌನ್ ಪ್ರಯುಕ್ತ ತಮ್ಮ ದೂರದ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಮೇ. 9 ರಂದು ಒಂದು ಲಾರಿಯ ಮೂಲಕ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹೈವೇ ರಸ್ತೆಯಲ್ಲಿ ಬಂದಿಳಿದಿದ್ದಾರೆ. ಅಲ್ಲಿಂದ ಕಾರಿನ ಮೂಲಕ ಸುರಪುರ ತಾಲ್ಲೂಕಿನ ಜ್ವರ ತಪಾಸಣಾ ಕೇಂದ್ರಕ್ಕೆ ನೇರವಾಗಿ ಆಗಮಿಸಿರುತ್ತಾರೆ. ಸದರಿ 3 ಜನರ ಹಾಗೂ ಒಬ್ಬ ವಾಹನ ಚಾಲಕನ ಆರೋಗ್ಯ ತಪಾಸಣೆ ಕೈಗೊಂಡು, ಗಂಟಲಿನ ದ್ರವವನ್ನು ಸಂಗ್ರಹಿಸಿ, ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಪ್ರತ್ಯೇಕವಾಗಿ ಅವಲೋಕನೆಗಾಗಿ ಇರಿಸಲಾಗಿರುತ್ತದೆ.

4 ಜನರ ಗಂಟಲಿನ ದ್ರವವನ್ನು ಕೋವಿಡ್-19 ಪರೀಕ್ಷೆಗಾಗಿ ಕಲಬುರಗಿಗೆ ಕಳುಹಿಸಲಾಗಿದ್ದು, ಇವರ ಪೈಕಿ ಇಬ್ಬರಿಗೆ ಸಕಾರಾತ್ಮಕ (Positive) ವರದಿಯಾಗಿದ್ದು, ಇನ್ನುಳಿದ ಇಬ್ಬರದ್ದು ನಕಾರಾತ್ಮಕ (Negative) ವರದಿಯಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಕಾರಾತ್ಮಕ ಪ್ರಕರಣಗಳಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡಬಾರದು ಎಂದು ಅವರು ಕೋರಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊರ ರಾಜ್ಯದಿಂದ ಆಗಮಿಸುತ್ತಿರುವ ವಲಸೆಗಾರರಿಗೆ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್/ ಹಾಸ್ಟೆಲ್/ ಶಾಲೆಗಳಲ್ಲಿ ಕಡ್ಡಾಯವಾಗಿ 14 ದಿನಗಳ ಅವಲೋಕನೆಗಾಗಿ ಇರಿಸಲಾಗುತ್ತಿದೆ. ಹೊರ ರಾಜ್ಯಗಳಿಂದ ಬಂದ ವಲಸೆಗಾರರು ನೇರವಾಗಿ ತಮ್ಮ ಸ್ವಗ್ರಾಮಕ್ಕೆ ಹೋಗಬಾರದು. ಒಂದು ವೇಳೆ ತೆರಳಿದರೆ ಅಂತಹವರ ಬಗ್ಗೆ ಮಾಹಿತಿ ನೀಡಲು ಮತ್ತು ಜಿಲ್ಲೆಯನ್ನು ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸುವ ಜಿಲ್ಲಾಡಳಿತ ಪ್ರಯತ್ನದಲ್ಲಿ ಸಹಕರಿಸಬೇಕಾಗಿ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

ಮೇ.11 ಮಧ್ಯರಾತ್ರಿಯಿಂದ ಮೇ.12. ಮಧ್ಯರಾತ್ರಿಯವರೆಗೆ ಸಾರ್ವಜನಿಕರ ವೈದ್ಯಕೀಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ, ಜಿಲ್ಲೆಯಾದ್ಯಂತ 144 ಸಿ.ಆರ್.ಪಿ.ಸಿ ಘೋಷಣೆ ಮಾಡಲಾಗಿರುತ್ತದೆ. ಮುಂದಿನ ದಿನದಲ್ಲಿ ಅಂಗಡಿ ಮಾಲೀಕರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ನಡೆಸದೇ ಇದ್ದಲ್ಲಿ, ಅಂತಹವರ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago