ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ದೇಶದ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ವೇಗ ನೀಡಲಿದೆ. ಇದೇ ವೇಳೆ ಗುಡಿ, ಗೃಹ, ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಚೇತರಿಕೆ ಅಗತ್ಯ ಜೀವವಾಯುವನ್ನು ಪೂರೈಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಕರೋನಾ ಮಹಾಮಾರಿಯ ಲಾಕ್ ಡೌನ್ ಸಂಧರ್ಭದಲ್ಲಿ ಈ ರೀತಿಯ ವಿಶೇಷ ಪ್ಯಾಕೇಜ್‌ನ ಅವಶ್ಯಕತೆ ಬಹಳಷ್ಟಿತ್ತು. ಅದರಲ್ಲೂ ಲಾಕ್ ಡೌನ್ ನಿಂದಾಗಿ ತೊಂದರೆಗೆ ಈಡಾಗಿದ್ದ ಕೈಗಾರಿಕಾ ವಲಯದ ಚೇತರಿಕೆಗೆ ವಿಶೇಷ ವಾದಂತಹ ಸೌಲಭ್ಯ ನೀಡುವುದು ಅಗತ್ಯವಾಗಿತ್ತು. ಈ ನಿಟ್ಟಿನಲ್ಲಿ ನಮ್ಮ ದೇಶದ ಜಿಡಿಪಿಯ ಶೇಕಡಾ 10 ರಷ್ಟು ಮೌಲ್ಯದ ಪ್ಯಾಕೇಜ್ ಘೋಷಣೇ ನೀಡಿರುವುದು ಒಳ್ಳೆಯ ಬೆಳವಣಿಗೆ ಆಗಿದೆ. ಮುಂಬರುವ ದಿನಗಳಲ್ಲಿ ಕೇಂದ್ರದ ಆರ್ಥಿಕ ಸಚಿವರು ನೀಡುವ ಯೋಜನೆಯ ರೂಪು ರೇಷೆಗಳು ಇನ್ನಷ್ಟು ಆಶಾದಾಯಕವಾಗಿರಲಿವೆ ಎಂದು ಹೇಳಿದರು.
ಭಾರತ ಜಾಗತಿಕ ಶಕ್ತಿ ಆಗಲು ಒಳ್ಳೆಯದಾದಂತಹ ಪ್ಯಾಕೇಜ್ ಇದಾಗಿದೆ. ಸ್ಥಳಿಯವಾಗಿ ಉತ್ಪಾದನೆಗೆ ಹೆಚ್ಚಿನ ಬಲ ನೀಡುವ ಮೂಲಕ, ಆತ್ಮ ನಿರ್ಭರ ಭಾರತ್ ಯೋಜನೆ ದೇಶದ ಎಲ್ಲಾ ವರ್ಗದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಿದೆ ಎಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…