ಅಂಕಣ ಬರಹ

ಅಬ್ರಹಾಂ ಲಿಂಕನ್ ತನ್ನ ಮಗನನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು?

ಇದು ನನ್ನೊಂದಿಗೆ ಹುಟ್ಟಿಕೊಂಡ ಕನಸುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ…..

ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ. “ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ….” ಎಂದು ದಯವಿಟ್ಟು ಹೇಳಿಕೊಡಬೇಡಿ.

ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.

ಅವನಿಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ. ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.

ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ. ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ.

ಸಾಧ್ಯವಾದರೆ ಅವನಿಗೆ ಪ್ರಕೃತಿಯಲ್ಲಿ ಕಳೆದುಹೋಗುವುನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ ಕುತೂಹಲ ತುಂಬಿ. ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ.

ಬದುಕಿನಲ್ಲಿ ಮೋಸ ಮಾಡಿ ಗೆಲ್ಲುವುದಕ್ಕಿಂತ, ಪ್ರಾಮಾಣಿಕವಾಗಿ ಸೋಲುವುದನ್ನು ಕಲಿಸಿ, ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.

ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ, ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು ತಿಳಿಯಲಿ. ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋ ವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.

ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ, ನಾನು ಅವನನ್ನು ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ ಒಳ್ಳೆಯ ಮನುಷ್ಯನಾಗಿ ಬಾಳುವುದನ್ನು ಕಾಣ ಬಯಸುತ್ತೇನೆ.

ಅವನಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ…

ಮೇನಕಾ ಪಾಟೀಲ್ ಬೀದರ್
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago