ಶಹಾಪುರ : ನನ್ನ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪ್ರತಿಯೊಂದು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಹಗಲಿರುಳು ಶ್ರಮಿಸುವೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಇಂದು ತಾಲ್ಲೂಕಿನ ಸಲದಾಪುರ ಗ್ರಾಮದ ಹತ್ತಿರವಿರುವ ಬ್ರಿಜ್ ಕಂ ಬ್ಯಾರೇಜಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಮಳೆಯಾದಾಗ ಹಳ್ಳದ ಮೂಲಕ ಹರಿದು ವೇಸ್ಟ್ ಆಗುವ ನೀರನ್ನು ಬ್ಯಾರೇಜ್ ನಿರ್ಮಿಸಿ ತಡೆ ಹಿಡಿದು,ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ, ಬ್ರಿಜ್ ಕಂ ಬ್ಯಾರೇಜಿನಿಂದ ಈ ಭಾಗದ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ಅನುಕೂಲಕರವಾಗಲಿದೆ. ನೀರನ್ನು ತಡೆದು ನಿಲ್ಲಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಅಲ್ಲದೆ ರೈತಾಪಿ ವರ್ಗದ ಜನರಿಗೆ ವರ್ಷವಿಡೀ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.
1.20 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪ್ರಾರಂಭವಾಗಲಿರುವ ಈ ಕಾಮಗಾರಿ ನಿಗದಿತ ಅವಧಿಯೊಳಗೆ ಅಚ್ಚುಕಟ್ಟಾಗಿ ಮುಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೆ ಸೂಚಿಸಿದರು.
ಬಡವರಿಗಾಗಿ ರೈತರಿಗಾಗಿ ಸಾಕಷ್ಟು ಯೋಜನೆಗಳಿವೆ ಅದರ ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಯಶಸ್ವಿ ಕಾಣಬೇಕು ಎಂದು ನುಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಮರಿಗೌಡ ಪಾಟೀಲ ಹುಲ್ಕಲ್,ಹಿರಿಯ ರಾಜಕಾರಣಿ ಹಾಗೂ ರೈತ ಮುಖಂಡರಾದ ಶರಣಪ್ಪ ಸಲಾದಪುರ, ಬಸನಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…