ಬಿಸಿ ಬಿಸಿ ಸುದ್ದಿ

ಜಾಹೀರಾತು ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ

ಕಲಬುರಗಿ: ರಾಜ್ಯದಲ್ಲಿ 500ಕ್ಕು ಹೆಚ್ಚು ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿದ್ದು, ಒಂದು ಪತ್ರಿಕೆಯಲ್ಲಿ ಕನಿಷ್ಠ 5 ರಿಂದ 6ಜನ ವರದಿಗಾರರೆಂದು, ಪತ್ರಿಕೆ ವಿತರಕರು ಸೇರಿದಂತೆ ಸುಮಾರು 5000ಕ್ಕೂ ಹೆಚ್ಚು ಜನ ಈ ಪತ್ರಿಕೆಗಳನ್ನು ಅವಲಂಬಿಸಿದ್ದು, ಅವರ ವೇತನ ಸೇರಿದಂತೆ ಇನ್ನಿತರ ಖರ್ಚು ವೆÀಚ್ಚಗಳಿಗಾಗಿ ಕೂಡಲೇ ಜಾಹೀರಾತು ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ್ದು, ಲಾಕ್‍ಡೌನ್ ಸಂದರ್ಭದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಈ 5000 ಪತ್ರಕರ್ತರು ಹಾಗೂ ಅವರ ಕುಟುಂಬಗಳು ಬೀದಿಗೆ ಬೀಳುವ ಹಂತ ತಲುಪಿವೆ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿದ್ದಾರೆ.
ಲಾಕ್‍ಡೌನ್ ಸಂದರ್ಭದಲ್ಲಿ ಜಾಹಿರಾತುಗಳಿಲ್ಲದೆ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು ತೀರ್ವ ಸಂಕಷ್ಟಕ್ಕೆ ಸಿಲುಕಿಕೊಂಡಿವೆ ಏಕೆಂದರೆ ಜಾಹಿರಾತುಗಳೇ ಪತ್ರಿಕೆಗಳಿಗೆ ಆರ್ಥಿಕ ಜೀವಾಳವೆಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ. ಸರ್ಕಾರಿ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳು ಜಾಹಿರಾತು ನೀಡಿರುವ ಬಾಕಿ ಬಿಲ್ಲು ಸುಮಾರು ಕೋಟಿಗೂ ಹೆಚ್ಚು ಹಣ ಬಿಡುಗಡೆಯಾಗಬೇಕಾಗಿದೆ. ಕೂಡಲೇ ಹಣ ಬಿಡುಗಡೆಗೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಬಾಕಿ ಜಾಹಿರಾತು ಹಣ ಬಿಡುಗಡೆ ಮಾಡಿ ಪ್ಯಾಕೇಜ್ ರೂಪದಲ್ಲಿ ಜಾಹಿರಾತನ್ನು ನೀಡುವ ಮೂಲಕ ಪತ್ರಿಕೆಗಳಿಗೆ ಬಾಕಿ ಬರಬೇಕಾಗಿದ್ದ ಬಿಲ್ಲನ್ನು ಎಷ್ಟು ಬಾರಿ ಮನವಿ ಸಲ್ಲಿಸಿದರು ಕೂಡ ದಿವ್ಯ ನಿರ್ಲಕ್ಷ್ಯ ತೋರುತ್ತೀರುವ ಸರ್ಕಾರದ ಕ್ರಮವನ್ನು ಮನವಿಯಲ್ಲಿ ಖಂಡಿಸಿದ್ದಾರೆ.
ಗುಜರಾತಿನಲ್ಲಿ ಮಾಧ್ಯಮಗಳಿಗೆ ಸರ್ಕಾರಿ ಜಾಹಿರಾತಿನ ಬಾಕಿ ಹಣ ಪೂರ್ಣ ಮೊತ್ತವನ್ನು ಬಿಡುಗಡೆ ಮಾಡುವ ಮೂಲಕ ವಿಶೇಷ ಪ್ಯಾಕೇಜ್ ರೂಪದಲ್ಲಿ ಅಲ್ಲಿನ ಸರ್ಕಾರ ನೇರವು ನೀಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿ ಕೂಡ ಪ್ಯಾಕೇಜ್ ರೂಪದಲ್ಲಿ ಜಾಹಿರಾತು ನೀಡಿ ಅದರ ಮೊತ್ತವನ್ನು ಕೂಡಲೇ ಬೀಡುಗಡೆ ಮಾಡಬೇಕು ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೇ, ಕೋವಿಡ್-19ರ ಸಂದರ್ಭದಲ್ಲಿ ಪತ್ರಕರ್ತರನ್ನು ಕೋರೊನಾ ವಾರಿಯರ್ಸ್ ಎಂದು ಹೆಸರಿಗಷ್ಟೆ ಸೀಮಿತವಾಗಿದ್ದು ಬಿಟ್ಟೆರೆ ಅವರ ಸಂಕಷ್ಟಕ್ಕೆ ನೇರವಾಗದಿರುವುದು ದುಃಖದ ಸಂಗತಿಯಾಗಿದೆ ಎಂದು ಮನವಿಯಲ್ಲಿ ವಿಷಾದಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶರಣಬಸಪ್ಪ ಜಿಡಗಾ, ಡಿ. ಶಿವಲಿಂಗಪ್ಪ, ದೇವಿಂದ್ರಪ್ಪ ಕಪನೂರ, ಗುಣಶೇಖರ ಸ್ವಾಮಿ, ಶಾಮಕುಮಾರ ಸಿಂಧೆ, ಸಿದ್ದಪ್ಪಾ ಸುಭೆದಾರ್, ಚಂದ್ರಕಾಂತ ಹಾವನೂರ, ಬಾಲಾಜಿ ಚಿತ್ತೇಕರ್, ರಮೇಶ ಕಮಿತಕರ್, ಗುರುರಾಜ ಕುಲಕರ್ಣಿ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago