ಬಿಸಿ ಬಿಸಿ ಸುದ್ದಿ

ರಾಜ್ಯದ ಗ್ರಾಮೀಣ ಭಾಗದ ಪತ್ರಕರ್ತಗೆ ಸಹಾಯಧನ ಘೋಷಿಸಲು ಕೆಜೆಯು ಒತ್ತಾಯ

ಸುರಪುರ: ದೇಶದಲ್ಲಿನ ಅನೇಕ ವರ್ಗದ ಕಸಬುದಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊರೊನಾ ಲಾಕ್‌ಡೌನ್ ಪರಿಹಾರ ಧನವನ್ನು ಘೋಷಣೆ ಮಾಡಿವೆ.ಆದರೆ ರಾಜ್ಯದಲ್ಲಿನ ಎಲ್ಲಾ ವರ್ಗದ ಜನರು ಕೊರೊನಾ ಲಾಕ್‌ಡೌನ್ ಕಾರಣದಿಂದ ಪಡುತ್ತಿರುವ ಸಂಕಷ್ಟವನ್ನು ಎತ್ತಿ ತೋರಿಸಿದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಕಡೆಗಣಿಸಿರುವುದು ಸರಿಯಲ್ಲ ಎಂದು ಕರ್ನಾಟಕ ಜರ್ನಲಿಸ್ಟ್ಸ್ ಯೂನಿಂiiನ್ ತಾಲೂಕು ಅಧ್ಯಕ್ಷ ರಾಜು ಕುಂಬಾರ ಸರಕಾರಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ತಾಲೂಕು ಘಟಕದಿಂದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿ,ಗ್ರಾಮೀಣ ಭಾಗದ ಪತ್ರಕರ್ತರು ಹಗಲಿರಳು ಜನರ ಕಷ್ಟಕ್ಕೆ ಸ್ಪಂದಿಸುವ ಜೊತೆಗೆ ಜನರ ಬದುಕಿನ ಭವಣೆಗಳನ್ನು ಸರಕಾರಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.ಅಲ್ಲದೆ ಅನೇಕ ಸಂದರ್ಭಗಳಲ್ಲಿ ಜೀವದ ಹಂಗು ತೊರೆದು ವರದಿಗಾರಿಕೆಗೆ ಮುಂದಾಗಿದ್ದಾರೆ.ಇದರಿಂದ ಸರಕಾರಗಳು ಮಾದ್ಯಮಗಳನ್ನು ಕೊರೊನಾ ವಾರಿಯರ್ಸ್ ಎಂದು ಹೇಳಿದೆ.ಆದರೆ ಈ ಮಾದ್ಯಮಗಳಲ್ಲಿ ದುಡಿಯುವವರ ಬದುಕಿನ ಬಗ್ಗೆ ಕಿಂಚಿತ್ತೂ ಕಾಳಜಿ ತೋರದೆ ನಿರ್ಲಕ್ಷ್ಯ ತೋರಿವೆ.ಗ್ರಾಮೀಣ ಭಾಗದಲ್ಲಿನ ವರದಿಗಾರರ ಬದುಕು ಸದಾಕಾಲ ನರಳುತ್ತಿರುತ್ತದೆ.ಸಾವಿರ ಎರಡು ಸಾವಿರ ರೂಪಾಯಿಗಳಿಗೆ ಹಗಲಿರಳು ದುಡಿಯುತ್ತಾರೆ.ಆದರೆ ಎಲ್ಲರ ಕಷ್ಟ್ಕಕೆ ಸ್ಪಂಧಿಸುವ ಮಾದ್ಯಮದ ವರದಿಗಾರರಿಗೆ ಮಾತ್ರ ಸರಕಾರಗಳು ಕಾಳಜಿ ತೋರದಿರುವುದು ನೋವಿನ ಸಂಗತಿಯಾಗಿದೆ.ಸರಕಾರ ಕೂಡಲೆ ರಾಜ್ಯದ ಎಲ್ಲಾ ಗ್ರಾಮೀಣ ಪತ್ರಕರ್ತರಿಗೆ ಸಹಾಯಧನ ಘೋಷಣೆ ಮಾಡಬೇಕೆಂದು ವಿನಂತಿಸುವುದಾಗಿ ತಿಳಿಸಿ,ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಕೆಜೆಯು ಉಪಾಧ್ಯಕ್ಷ ಮಲ್ಲು ಗುಳಗಿ,ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ,ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ,ಸಂಘಟನಾ ಕಾರ್ಯದರ್ಶಿ ಸೋಮಶೇಖರ ನರಬೋಳಿ,ರಾಘವೇಂದ್ರ ಮಾಸ್ತರ್,ಕಲೀಂ ಫರೀದಿ ಹಾಗು ಶಿವರಾಜ ಪಾಣೆಗಾಂವ್,ಭೀಮಯ್ಯ ಕಡೇಚೂರ,ಧೀರೆಂದ್ರ ಕುಲಕರ್ಣಿ,ಆಸಿಫ್ ಯಾದಗಿರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago