ಶಹಾಬಾದ: ನಗರದ ವಾರ್ಡ ನಂ. ೧೭ರ ನಗರಸಭೆಯ ಸದಸ್ಯೆ ಸಾಬೇರಾಬೇಗಂ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಜನ್ಮದಿನದ ನಿಮಿತ್ತ ನಿರ್ಗತಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಡಾ.ರಶಿದ್ ಮರ್ಚಂಟ್, ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ.ಕೆಲಸಕ್ಕಾಗಿ ದೂರದಿಂದ ಬಂದ ಜನರಿಗೆ ದುಡಿಯಲು ಕೆಲಸವಿಲ್ಲ. ಕೈಯಲ್ಲಿ ಹಣವಿಲ್ಲದೇ ಕಂಗಾಲಾಗಿದ್ದಾರೆ. ಇದರಿಂದ ಕಷ್ಟದ ಬದುಕು ನಿರ್ಮಾಣವಾಗಿದೆ. ಅಲ್ಪಸ್ವಲ್ಪ ಇದ್ದ ದುಡ್ಡು ಖಾಲಿಯಾಗಿದೆ.ಇಂತಹ ಅನೇಕ ಕುಟುಂಬಗಳಿಗೆ ಆಹಾರ ತಯ್ಯಾರು ಮಾಡಿ ನೀಡಿದರೇ ಒಂದು ದಿನದ ಮಟ್ಟಿಗೆ ಆಗಬಹುದು.ಅದರ ಬದಲಿಗೆ ಇದ್ದವರು ಸ್ವಲ್ಪ ಆಹಾರ ಪದಾರ್ಥಗಳನ್ನು ನೀಡಿದರೇ ಹದಿನೈದು ಅಥವಾ ತಿಂಗಳಿಗಾಗುವಷ್ಟು ಆಗುತ್ತದೆ. ಅವರೇ ಆಹಾರವನ್ನು ಮಾಡಿಕೊಂಡು ಊಟ ಮಾಡುತ್ತಾರೆ.
ಈ ಸಂದರ್ಭದಲ್ಲಿ ದಾಸೋಹ ಮಾಡುವ ಜನರು ಹೆಚ್ಚಾಗಲಿ ಎಂದು ಮನವಿ ಮಾಡುತ್ತೆನೆ ಎಂದರು.
ಸುಮಾರು ೨೦೦ಬಡಜನರಿಗೆ ಆಹಾರ ಪದಾರ್ಥಗಳ ಕಿಟ್ ನೀಡಲಾಯಿತು. ಮುಖಂಡರಾದ ವಿಜಯಕುಮಾರ ಮುಟ್ಟತ್ತಿ, ಮೃತ್ಯುಂಜಯ್ ಹಿರೇಮಠ, ದೇವಿಂದ್ರಪ್ಪ ವಾಲಿ, ಅನ್ವರ ಪಾಶಾ, ನಾಗಣ್ಣ ರಾಂಪೂರೆ, ಮತಿನ್ ಬಾದಲ್, ಮಹ್ಮದ್ ಜಾನಿ, ಮೆಹಬೂಬ ಮದ್ರಿ ಇತರರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…