ಶಹಾಬಾದ: ನಗರದ ಲಕ್ಷ್ಮೀ ಗಂಜ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಪರಿಶೀಲನೆ ನಡೆಸಿದರು.
ಲೋಕೋಪಯೋಗಿ ಇಲಾಖೆಯ 60 ಲಕ್ಷ ರೂ. ವೆಚ್ಚದಲ್ಲಿ ಅನುದಾನದಲ್ಲಿ 300 ಮೀ.ಸಿಸಿ ರಸ್ತೆ, 1 ಕಿ.ಮೀ ಚರಂಡಿ ನಿರ್ಮಾಣವಾಗುತ್ತಿದ್ದು, ಕಾಮಗಾರಿ ವೀಕ್ಷಿಸಿದ ಶಾಸಕರು ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ತಾಕೀತು ಮಾಡಿದರು.
ಒಂದು ವೇಳೆ ಕಳಪೆ ಕಾಮಗಾರಿ ನಡೆದರೆ ಗುತ್ತಿಗೆದಾರರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಸಂಬಂಧಿಸಿದ ಅಧಿಕಾರಿ ವರ್ಗವದರು ಗುಣಮಟ್ಟದ ಕಾಮಗಾರಿ ಕಡೆಗೆ ಗಮನಹರಿಸಬೇಕೆಂದು ತಿಳಿಸಿದರು.
ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಿಂಗಣ್ಣ ಹುಳಗೋಳಕರ್,ಅಣೆಪ್ಪ ಇಂಗಿನಶೆಟ್ಟಿ, ಭೀಮಣ್ಣ ಖಂಡ್ರೆ, ಅರುಣಕುಮಾರ ಪಟ್ಟಣಕರ್, ಸೂರ್ಯಕಾಂತ ವಾರದ, ಸುಭಾಷ ಜಾಪೂರ, ಅಣ್ಣಪ್ಪ ದಸ್ತಾಪುರ, ಕನಕಪ್ಪ ದಂಡಗುಲಕರ್, ನಾಗರಾಜ ಮೇಲಗಿರಿ, ಭಾಗೀರತಿ ಗುನ್ನಾಪುರ, ಜಯಶ್ರೀ ಸೂಡಿ, ಸದಾನಂದ ಕುಂಬಾರ, ಶ್ರೀಧರ ಜೋಶಿ,ಸಂಜಯ ಸೂಡಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…