ಕಲಬುರಗಿಯಿಂದ ಬಿಹಾರ ರಾಜ್ಯದ ವಲಸೆ ಕಾರ್ಮಿಕರಿಗೆ ವಿಶೇಷ ರೈಲಿನ ವ್ಯವಸ್ಥೆ: ಹೆಸರು ನೋಂದಣಿಗೆ ಸೂಚನೆ

0
57

ಕಲಬುರಗಿ: ಕೊರೋನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ ಬಿಹಾರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ಖರ್ಚಿನಲ್ಲಿ ರೈಲ್ವೆ ಮೂಲಕ ಬಿಹಾರಕ್ಕೆ ತೆರಳಲು ರೈಲ್ವೆ ಇಲಾಖೆಯಿಂದ 2020ರ ಮೇ 20 ರಂದು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಿಹಾರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಈ ರೈಲಿನಲ್ಲಿ ಪ್ರಯಾಣ ಬೆಳೆಸಲು ಇಚ್ಛಿಸುವ ಬಿಹಾರ ರಾಜ್ಯದ ವಲಸೆ ಕಾರ್ಮಿಕರು ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಗಳಾದ ಶ್ರೀಹರಿ ದೇಶಪಾಂಡೆ ಇವರನ್ನು ಮೊಬೈಲ್ ಸಂಖ್ಯೆ 8660952314, 9164046824 ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here