ಸೇಡಂ : ತಾಲ್ಲೂಕಿನ ಊಡಗಿ ಗ್ರಾಮದಲ್ಲಿ ಇಂದು ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಹಸು ಒಂದ ಮೃತಪಟ್ಟಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ.
ಶಿವಪ್ಪ ಪಟ್ಲಿ ಎಂಬುವರಿಗೆ ಸೇರಿದ ಹಸು. ಕಳೆದ ಎರಡು ದಿನಗಳ ಹಿಂದೆ ಮೊಹರಮ್ ಮಸೀದಿ ಹತ್ತಿರ ಮಳೆ- ಗಾಳಿಯಿಂದ ವಿದ್ಯುತ್ ಕಂಬ ಬಿದ್ದಿರುವ ಘಟನೆ ಗ್ರಾಮದಲ್ಲಿ ನಡೆದಿತ್ತು. ಆದರೆ ಅದರುಷ್ಟವಶಾತ
ಯಾವುದೇ ಅಪಾಯ ಸಂಭವಿಸಿರಲಿಲ್ಲ. ವರ್ಷಗಳಿಂದ ಕೆಲವು ವಿದ್ಯುತ್ ಕಂಬಗಳು ಬೀರುಕ್ಕು ಬಿಟ್ಟು ಶಿಥಿಲಗೊಂಡು ಅಪಘಾತಕ್ಕೆ ಆಹ್ವಾನ ನೀಡುವ ಸ್ಥಿತಿಯಲ್ಲಿದ್ದು, ಗ್ರಾಮದ ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.
ಹಲವು ಬಾರಿ ವಿದ್ಯುತ್ ಇಲಾಖೆಗೆ ದೂರು ನೀಡಿದರು ಸಂಬಂಧ ಪಟ್ಟ ಅಧಿಕಾರಿಗಳು ಕ್ಯಾರೆ ಏನ್ನುತ್ತಿಲ್ಲ ಎಂದು ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೆ.ಇ.ಬಿ ಮತ್ತು ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ನೆಲಕ್ಕೆ ಹಸು ಸ್ಥಳದಲ್ಲೇ ಸಾವನಪ್ಪಿದೆ. ಇಂತಹ ಘಟನೆಗೆ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಅಗುವ ಭಾರಿ ಅನಾಹುತ ತಡೆಯಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಈ ಕುರಿತು ಸೇಡಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…