ಕಲಬುರಗಿ: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಹಡಪದ ಮತ್ತು ಸವಿತಾ ಸಮಾಜದ ಕ್ಷೌರಿಕರಿಗೆ ರವಿವಾರ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಆಹಾರಧಾನ್ಯಗಳ ಕಿಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.
1200 ರೂ.ಗಳ ಬೆಲೆಯ ಈ ಕಿಟ್ ನಲ್ಲಿ 4 ಕೆ.ಜಿ.ಅಕ್ಕಿ, 5 ಕೆ.ಜಿ.ಗೋಧಿ, ತಲಾ 2 ಕೆ.ಜಿ. ತೊಗರಿ ಬೇಳೆ ಮತ್ತು ಸಕ್ಕರೆ, 1 ಕೆ.ಜಿ. ಅಡುಗೆ ಎಣ್ಣೆ, ತಲಾ 1 ಕೆ.ಜಿ. ಖಾರಾ ಮತ್ತು ಉಪ್ಪು, ತಲಾ 100 ಗ್ರಾಂ ಅರಶಿನ, ಜೀರಿಗೆ ಮತ್ತು ಟೀ ಪೌಡರ್ ಅಲ್ಲದೆ ಸಾಬೂನು, ಟೂಥ್ ಬ್ರಶ್, ಪ್ಯಾರಾಶೂಟ್ ಎಣ್ಣೆ ಒಳಗೊಂಡಿದೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈಗಾಗಲೆ ಜಿಲ್ಲೆಯಾದ್ಯಂತ ಕ್ಷೌರಿಕರಿಗೆ ಆಹಾರಧಾನ್ಯಗಳ ಕಿಟ್ ವಿತರಣೆ ಕಾರ್ಯ ನಡೆಯುತ್ತಿದ್ದು, ಎರಡು ದಿನದಲ್ಲಿ ಒಟ್ಟಾರೆ 1775 ಕ್ಷೌರಿಕ ಕುಟುಂಬಗಳಿಗೆ ಕಿಟ್ ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಜಿಲ್ಲಾ ಹಡಪದ ಸಮಾಜದ ಅಧ್ಯಕ್ಷ ಈರಣ್ಣಾ ಹಡಪದ ಸಣ್ಣೂರ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ ಬಾದಾಮಿ ಸೇರಿದಂತೆ ಸವಿತಾ ಮತ್ತು ಹಡಪದ ಸಮಾಜದ ಬಾಂಧವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…