ಬಿಸಿ ಬಿಸಿ ಸುದ್ದಿ

ನಿಯಮ ಬದ್ಧವಾಗಿ ಸಾರಿಗೆ ಬಸ್ ಆರಂಭ: ವೇಳಾ ಪಟ್ಟಿ ಇಲ್ಲಿದೆ

ಕಲಬುರಗಿ: ಕರ್ನಾಟಕ ರಾಜ್ಯದೊಳಗೆ Containment Zone ಹೊರತುಪಡಿಸಿ ಹಾಗೂ ಪ್ರತಿ ರವಿವಾರ ಸಂಪೂರ್ಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಷರತ್ತಿಗೊಳಪಟ್ಟು ಸಂಸ್ಥೆಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲು ಅನುಮತಿ ನೀಡಲಾಗಿದ್ದು, ಅದರಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಳ್ಳಾರಿ ಜಿಲ್ಲೆಗಳಿಂದ ಪ್ರತಿ ದಿನ ಬೆಳಿಗ್ಗೆ ೦೭.೦೦ ಗಂಟೆಯಿಂದ ಸಾಯಂಕಾಲ ೦೭.೦೦ ಗಂಟೆಯವರೆಗೆ Containment Zone ಹೊರತುಪಡಿಸಿ ಹಾಗೂ ಪ್ರತಿ ರವಿವಾರ ಸಂಪೂರ್ಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರತಿಯೊಂದು ಬಸ್ ನಿಲ್ದಾಣದಿಂದ ಕೊನೆಯ ನಿರ್ಗಮನವನ್ನು ಕೊನೆಯ ನಿಲ್ದಾಣ ತಲುಪುವ ಸಮಯದ ಆಧಾರದ ಮೇಲೆ ನಿರ್ಧರಿಸಲಾಗುವುದು. (ಬಸ್ಸುಗಳ ಕಾರ್ಯಾಚರಣೆ ಬೆಳಿಗ್ಗೆ ೦೭.೦೦ ಗಂಟೆಯಿಂದ ಸಾಯಂಕಾಲ ೦೭.೦೦ ಗಂಟೆಯವರೆಗೆ ಇರುವುದರಿಂದ)

ಈ ನಿಟ್ಟಿನಲ್ಲಿ ಈ ಕೆಳಕಂಡ ಬಸ್ ನಿಲ್ದಾಣಗಳಿಂದ ಪ್ರಮುಖ ಸ್ಥಳಗಳಿಗೆ ಕಾರ್ಯಾಚರಣೆಯಾಗುವ ಸಾರಿಗೆಗಳ ವಿವರ ಈ ಕೆಳಗಿನಂತಿರುತ್ತದೆ.

ಮೇಲಿನ ಸಾರಿಗೆಗಳನ್ನು ವಿರಳ ಜನದಟ್ಟಣೆ ಕಂಡು ಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದಿಲ್ಲ.

೧. ಮುಖಕ್ಕೆ ಮುಖ ಗವಸು ಧರಿಸಿದ ಪ್ರಯಾಣಿಕರಿಗೆ ಮಾತ್ರ ಬಸ್‌ನಲ್ಲಿ ಪ್ರವೇಶಿಸಲು ಅವಕಾಶವಿರುತ್ತದೆ. ಪ್ರಯಾಣಿಕರು ಮುಖಕ್ಕೆ ಮುಖ ಗವಸು ಧರಿಸದಿದ್ದರೆ ಬಸ್ ಒಳಗೆ ಪ್ರಯಾಣಕ್ಕೆ ಅನುಮತಿ ನೀಡಲಾಗುವುದಿಲ್ಲ.
೨. ಬಸ್ ನಿಲ್ದಾಣಗಳಿಗೆ ಒಳ ಬರುವ ಪ್ರಯಾಣಿಕರಿಗೆ ಒಂದೇ ದ್ವಾರ ಗುರುತಿಸಿದ್ದು, ಅದರ ಮುಖಾಂತರವೇ ಪ್ರವೇಶ ಮಾಡುವುದು ಹಾಗೂ ಪ್ರವೇಶ ದ್ವಾರದಲ್ಲಿ ಒಳ ಬರುವಾಗ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು.
೩. ಬಸ್ ನಿಲ್ದಾಣದೊಳಗೆ ಬರುವಾಗ ಹಾಗೂ ಬಸ್ ನಿಲ್ದಾಣದಲ್ಲಿ ಬಸ್‌ಗಳನ್ನು ಹತ್ತುವಾಗ ಹಾಗೂ ಇಳಿಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
೪. ಬಸ್ ನಿಲ್ದಾಣದ ಆವರಣದಲ್ಲಿ ಹಾಗೂ ಬಸ್ಸಿನಲ್ಲಿ ಎಲ್ಲಿಂದರಲ್ಲಿ ಉಗುಳುವುದನ್ನು ನಿಷೇಧಿಸಿದೆ.
೫. ಬಸ್ ನಿಲ್ದಾಣಗಳಲ್ಲಿ ಹಾಗೂ ಬಸ್ಸಿನಲ್ಲಿ ಪ್ರಯಾಣಿಕರು ತಂಬಾಕು, ಗುಟ್ಕಾ, ಧೂಮಪಾನವನ್ನು ನಿಷೇಧಿಸಿದೆ.
೬. ಸಾಮಾಜಿಕ ಅಂತರ ಕಾಪಾಡಲು ಬಸ್ಸಿನಲ್ಲಿ ವಿಶೇಷವಾಗಿ ಗುರುತಿಸಿದ ಆಸನಗಳನ್ನು ಕಲ್ಪಿಸಲಾಗಿದ್ದು, ಪ್ರಯಾಣಿಕರು ಗುರುತಿಸಿದ ಆಸನದಲ್ಲಿ ಮಾತ್ರ ಕುಳಿತುಕೊಳ್ಳುವುದು.
೭. ಒಂದು ಬಸ್ಸಿನಲ್ಲಿ ಕೇವಲ ೩೦ ಜನ ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿಸಲಾಗಿದೆ.
೮. ಹತ್ತು ವರ್ಷದೊಳಗಿನ ಮಕ್ಕಳು, ಗರ್ಭೀಣಿಯರು ಹಾಗೂ ೬೫ ವರ್ಷ ಮೇಲ್ಪಟ್ಟರವರಿಗೆ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶವಿರುವುದಿಲ್ಲ.
೯. ದೂರದ ಮಾರ್ಗಗಳಲ್ಲಿ ಸಂಚರಿಸುವ ಸಾರಿಗೆಗಳು ಮಾರ್ಗ ಮಧ್ಯದಲ್ಲಿ ಉಟೋಪಚಾರಕ್ಕಾಗಿ ನಿಲುಗಡೆ ಮಾಡಲಾಗುವುದಿಲ್ಲ. ಇದರಿಂದಾಗಿ ತಮಗೆ ಬೇಕಾಗುವ ಅವಶ್ಯವಿರುವ ಊಟ-ಉಪಹಾರವನ್ನು ತಮ್ಮ ಮನೆಯಿಂದಲೇ ತರುವುದು.
ಮೇಲಿನಂತೆ ನಿರ್ದೇಶನಗಳನ್ನು ಪಾಲಿಸಿ, ಸಂಸ್ಥೆಯ ಸಾರಿಗೆ ಸೇವೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು, ಕೊರೋನಾ ವಿರುದ್ದ ಹೋರಾಡಲು ಸಂಸ್ಥೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago