ಕಲಬುರಗಿ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳನ್ನು ಒಗ್ಗೂಡಿಸುವಂತೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸೋಮವಾರ ಕೆಎಸ್‌ಆರ್‌ಟಿಸಿ ಸ್ಟಾಪ್ ಆಂಡ್ ವರ್ಕರ್ಸ್ ಯೂನಿಯನ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.
ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಪಾಲ್ಕಿ, ಪ್ರಧಾನ ಕಾರ್ಯದರ್ಶಿ ರಾಮು ಗುತ್ತೇದಾರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಂದಕುಮಾರ ಜಮಾದಾರ್, ಶಾಂತಪ್ಪ ಹಸರಗುಂಡಗಿ, ಅಬ್ದುಲ್ ಕಲೀಂ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಈಗಾಗಲೇ ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್, ರಾಜ್ಯ ಸರಕಾರಗಳು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳ ಅನುಷ್ಠಾನಕ್ಕೆ ರಜೆ ಘೋಷಿಸುವಂತಹ ಪ್ರತಿಗಾಮಿ ಕ್ರಮಕ್ಕೆ ಮುಂದಾಗಿವೆ ಎಂದು ಅವರು ಆಕ್ಷೇಪಿಸಿದರು.
ಲಾಕ್‌ಡೌನ್ ಅವಧಿಗೆ ವೇತನ ಪಾವತಿಸದ ಕಾರಣ ದೇಶಾದ್ಯಂತ ದುಡಿಯುವ ವರ್ಗ ತೀವೃ ಸಂಕಷ್ಠಕ್ಕೆ ಒಳಗಾಗಿದೆ. ಇದು ಕೊಟ್ಯಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೂಡಲೇ ಮಾಲಿಕರಿಗೆ ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಕಡಿತವಿಲ್ಲದೇ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಕಾನೂನು ಉಲ್ಲಂಘಿಸಿದ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
ಉದ್ದೇಶಿತ ಕಾರ್ಮಿಕ ಕಾನೂನು ತಿದ್ದುಪಡಿ ಮಾರಕವಾಗಿದ್ದು, ಕೂಡಲೇ ಅದನ್ನು ಕೈಬಿಡುವಂತೆ ಆಗ್ರಹಿಸಿದ ಅವರು, ಕೃಷಿ ಉತ್ಪನ್ನ ಕಾಯ್ದೆ ಸಮಿತಿಯ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಮಹಾಮಾರಿ ಕರೋನಾ ವೈರಸ್ ಪಿಡುಗಿನ ವಿರುದ್ಧ ವೈದ್ಯರು, ಶುಶ್ರೂಷಕಿಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಗ್ರಾಮ ಪಂಚಾಯತಿ ನೌಕರರು, ಪೋಲಿಸ್ ಮತ್ತು ಸಾರಿಗೆ ಸಿಬ್ಬಂದಿ, ಅಂಗನಾವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಮುಂತಾದವರು ಆನೇಕ ಮುಖ್ಯಸ್ಥರದಲ್ಲಿನ ಕೆಸಲಗಾರಿಗೆ ಸಮರ್ಪಕ,ಪಿಪಿಇ ಕಿಟ್‌ಗಳು, ಆರೋಗ್ಯ ವಿಮೆ, ಪ್ರೋತ್ಸಾಹ ಧನ, ಉಚಿತ ತಪಾಸಣೆ, ಮತ್ತು ಚಿಕಿತ್ಸೆ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದ ನಾಲ್ಕು ನಿಗಮಗಳನ್ನು ಒಂದುಗೂಡಿಸಿ, ಅನಗತ್ಯ ಖರ್ಚು, ವೆಚ್ಚಗಳಿಗೆ ಕಡಿವಾಣ ಹಾಕಿ ನಿಗಮಗಳನ್ನು ಆರ್ಥಿಕವಾಗಿ ಬಲಪಡಿಸುವಂತೆ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಬಸ್ ಕಾರ್ಯಾಚರಣೆಗಾಗಿ ಖರೀದಿಸುವ ಡಿಸೇಲ್ ಮೇಲಿನ ಸುಂಕವನ್ನು ರಾಜ್ಯ ಸರ್ಕಾರ ವಿನಾಯಿತಿ ನೀಡುವ ಮೂಲಕ ನಷ್ಠ ಅನುಭವಿಸುವ ನಿಗಮಗಳಿಗೆ ನೆರವು ಕೊಡಬೇಕು ಎಂದು ಅವರು ಒತಾಯಿಸಿದರು.