ಕಲಬುರಗಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತಿದೆ. ಇಂದು ಮತ್ತೆ 7 ಜನರಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢ ಪಟ್ಟಿದ್ದು, ಪೀಡಿತರ ಸಂಖ್ಯೆ 134 ತಲುಪಿದೆ.
ಇಂದು ಆರೋಗ್ಯ ಇಲಾಖೆಯಿಂದ ಬಂದಿರುವ ವರದಿಯಲ್ಲಿ ಈ ಅಂಶತಿಳಿಸಿದೆ. ಪೀಡಿತರನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ ಎಂದು ತಿಳಿದುಬಂದಿದೆ.
ಪ್ರತಿ ದಿನ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನತೆ ಲಾಕ್ ಡೌನ್ ಕಟ್ಟು ನಿಟ್ಟಾಗಿ ಪಾಲಿಸುವುದು ಅಗತ್ಯವಿದೆ.
ಜಿಲ್ಲೆಯಲ್ಲಿ ಈಗಾಗಲೇ ಕೊರೊನಾದಿಂದ 7 ಜನರ ಮೃತಪಟ್ಡಿದ್ದಾರೆ. 72 ಪಿಡಿತರು ಚಿಕಿತ್ಸೆ ಪಡಿಯುತ್ತಿದ್ದು, 55 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.