ಕಲಬುರಗಿ: ಉದ್ಯೋಗ ಆರಿಸಿ ಇಲ್ಲಿಗೆ ಒಂದು ಲಾಕ್ ಡೌನ್ ನಿಂದ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ ಬಿಹಾರಿಗಳು ಬುಧವಾರ ರಾತ್ರಿ 8 ಗಂಟೆಗೆ ಶ್ರಮಿಕ್ ಎಕ್ಸ್ ಪ್ರೆಸ್ ರೈಲು ಮೂಲಕ ಬಿಹಾರನತ್ತ ಪ್ರಯಾಣ ಬೆಳೆಸಿದರು.
ಮಹಾಮಾರಿ ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಕಳೆದೆರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್ ಡೌನ್ ಪರಿಣಾಮ ವಲಸಿಗ ಕಾರ್ಮಿಕರು ಸಿಲುಕಿದರು. ಇದೀಗ ಲಾಕ್ ಡೌನ್ ಸಡಿಲಿಕೆ ನೀಡಿ ಆಯಾ ವಲಸಿಗ ಕಾರ್ಮಿಕರು ತಮ್ಮ ತವರು ರಾಜ್ಯಕ್ಕೆ ಪ್ರಯಾಣ ಬೆಳಸಲು ಸರ್ಕಾರ ಅವಕಾಶ ನೀಡಿರುವುದರಿಂದ ಬುಧವಾರ ಸಂಜೆ ಕಲಬುರಗಿ ರೈಲ್ವೆ ನಿಲ್ದಾಣದಿಂದ ಬಿಹಾರನತ್ತ ವಲಸಿಗರು ಮುಖ ಮಾಡಿದರು. ತವರಿನತ್ತ ಹೊರಟ ವಲಸಿಗರ ಮುಖದಲ್ಲಿ ಮಂದಹಾಸ ಕಂಡಿತು.
ಈ ಸಂದರ್ಭದಲ್ಲಿ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಹಾಜರಿದ್ದ ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸುಮಾರು 1436 ಬಿಹಾರದ ನಿವಾಸಿಗಳು ಪ್ರಯಾಣಕ್ಕೆ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲರು ಇಂದು ತಮ್ಮ ರಾಜ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದರು.
ಬಿಹಾರಕ್ಕೆ ಪ್ರಯಾಣ ಬೆಳೆಸಲು ಬೇರೆ ಜಿಲ್ಲೆಯಿಂದ ಬಂದವರನ್ನು ಆಯಾ ಜಿಲ್ಲೆಯಿಂದಲೇ ಸ್ಕ್ರೀನಿಂಗ್ ಮಾಡಿ ತರಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿದ್ದ ಕಾರ್ಮಿಕರಿಗೆ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಕ್ರೀನಿಂಗ್ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಮಂಗಳವಾರಷ್ಟೆ ಕಲಬುರಗಿ ರೈಲು ನಿಲ್ದಾಣದಿಂದ ಮೊದಲನೇ ಶ್ರಮಿಕ್ ಎಕ್ಸ್‌ಪ್ರೆಸ್ ರೈಲು ಸುಮಾರು 1500 ಜನ ಕಾರ್ಮಿಕರನ್ನು ಕಲಬುರಗಿ ರೈಲ್ವೆ ನಿಲ್ದಾಣದಿಂದ ಉತ್ತರ ಪ್ರದೇಶಕ್ಕೆ ಕರೆದುಕೊಂಡು ಹೋಗಿತ್ತು. ಇಂದು ಕಲಬುರಗಿಯಿಂದ ಬಿಹಾರಕ್ಕೆ ಕರೆದುಕೊಂಡು ಹೋಗುತ್ತಿರುವ ಎರಡನೇ ಶ್ರಮಿಕ್ ಎಕ್ಸ್ ಪ್ರೆಸ್ ಇದಾಗಿದೆ. ಈ ರೈಲು ಶುಕ್ರವಾರ ಬಿಹಾರ ತಲುಪಲಿದೆ ಎಂದರು.
ಗುರುವಾರ ಮತ್ತೊಂದು ರೈಲು ಬಿಹಾರಕ್ಕೆ: ಬಿಹಾರದ ವಲಸಿಗ ಕಾರ್ಮಿಕರ ಪ್ರಯಾಣಕ್ಕೆ ಕಲಬುರಗಿ ರೈಲ್ವೆ ನಿಲ್ದಾಣದಿಂದ ಗುರುವಾರ ಮತ್ತೊಂದು ಶ್ರಮಿಕ್ ಎಕ್ಸ್‌ಪ್ರೆಸ್ ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಶರತ್ ಬಿ. ಮಾಹಿತಿ ನೀಡಿದರು.
ಡಿ.ಸಿ.ಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಸ್ಟೇಷನ್ ಮಾಸ್ಟರ್ ಪ್ರಸಾದ ರಾವ್ ಸೇರಿದಂತೆ ಇನ್ನಿತರ ಅಧಿಕಾರಿಗಳು ವಲಸಿಗ ಕಾರ್ಮಿಕರನ್ನು ಬೀಳ್ಕೊಟ್ಟರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…