ಶಹಾಬಾದ: ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ, ಖಾಸಗಿ ಶಾಲೆಗಳಲ್ಲಿನ ಶಿಕ್ಷಕರಿಗೆ ಹಾಘೂ ಪ್ರಾಧ್ಯಾಪಕರಿಗೆ ತಕ್ಷಣವೇ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿ ಪರಿಹಾರ ಕಲ್ಪಿಸಬೇಕೆಂದು ಖಿಲ ಭಾರತ ಶಿಕ್ಷಣ ಉಳಿಸಿ ಶಹಾಬಾದ ತಾಲೂಕಾ ಸಮಿತಿ ಮುಖಂಡ ಶಿವಕುಮಾರ ಕುಸಾಳೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ 3ಲಕ್ಷಕ್ಕೂ ಹೆಚ್ಚು ಖಾಸಗಿ ಶಾಲಾ ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ.ಕನಿಷ್ಠ ವೇತನದಲ್ಲಿ ದುಡಿಯುವ ಇವರ ಪರಿಸ್ಥಿತಿ ಹೇಳತೀರದಂತಾಗಿದೆ.
ಅಲ್ಲದೇ ಬೇಸಿಗೆ ರಜೆಯಲ್ಲಿ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಸಂಬಳವೇ ನೀಡುತ್ತಿಲ್ಲ. ಲಾಕ್‍ಡೌನ್‍ನಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶಾಲಾ ಕಾಲೇಜುಗಳು ಇನ್ನೂ ಅಗಸ್ಟವರೆಗೆ ತೆರೆಯುವ ಹಾಗಿಲ್ಲ ಎಂದು ಸುದ್ದಿ ಹರಿದಾಡುತ್ತಿದೆ.ಇಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರ ಇವರಿಗೆ ಸಹಾಯ ಹಸ್ತ ಚಾಚಬೇಕೆಂದು ಆಗ್ರಹಿಸಿದರು.