ಕಲಬುರಗಿ: ಕೊರೋನಾ ಲಾಕ್ಡೌನ್ ಕಾರಣದಿಂದ ಈಗಾಗಲೇ ರಾಜ್ಯದ ಅನೇಕ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಈಗ ರಾಜ್ಯ ಸರ್ಕಾರವು ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಮುಂದಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಕುರಿತು ಪೊಸ್ಟಮಾಡಿ, ಎಪಿಎಂಸಿ ಕಾಯಿದೆಯನ್ನು ತಿದ್ದುಪಡಿಗೊಳಿಸಿ 2017ರ ‘ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯಿದೆ’ಯನ್ನು (APML ಕಾಯಿದೆ) ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವಂತೆ ಕೇಂದ್ರ ಸರಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು, ರಾಜ್ಯದ ರೈತರ ಹಿತವನ್ನು ಬಲಿಕೊಟ್ಟಿದೆ.
ಯಾವುದೇ ಕಾಯಿದೆಗೆ ತಿದ್ದುಪಡಿ ತರುವ ಮುನ್ನ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಆದರೆ, ವಿಧಾನಮಂಡಲ ಅಧಿವೇಶನ ಇಲ್ಲದ ಈ ಸಮಯವನ್ನು ಬಳಸಿಕೊಂಡು ತುರ್ತು ಸಂದರ್ಭದ ನೆಪ ಹೇಳಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕಾಯಿದೆಯ ಬಗ್ಗೆ ರೈತ ಮುಖಂಡರೊಂದಿಗೆ, ಸಂಘಟನೆಗಳೊಂದಿಗೆ ಹಾಗೂ ವಿರೋಧ ಪಕ್ಷಗಳೊಂದಿಗೆ ಚರ್ಚಿಸದೇ ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
1. ವ್ಯಾಪಾರಸ್ಥರು, ನಾನಾ ಕಂಪನಿಯವರು ನೇರವಾಗಿ ರೈತರ ಮನೆ ಬಾಗಿಲಿಗೆ ತೆರಳಿ ಬೆಳೆ ಖರೀದಿಸಬಹುದು.
ಇದು ರೈತರು ಎಪಿಎಂಸಿಗಳಲ್ಲಿ ಸ್ಪರ್ಧಾತ್ಮಕ ಮಾರಾಟದಿಂದ ಒಳ್ಳೆಯ ದರ ಪಡೆಯಲು ಅಡ್ಡಗಾಲಾಗಲಿದೆ.
2. ಎಪಿಎಂಸಿ ಕಾಯಿದೆಗೆ ತಿದ್ದುಪಡಿಯಿಂದ ಬಂಡವಾಳಶಾಹಿಗಳಿಗೆ ಮತ್ತು ಕಾರ್ಪೊರೇಟ್ ವಲಯದ ಬಹುರಾಷ್ಟ್ರೀಯ ಕಂಪನಿಗಳಿಗೆ ಮತ್ತು ಆನ್ಲೈನ್ ಮಾರಾಟ ಕಂಪೆನಗಳಿಗೆ ಮಾತ್ರ ಅನುಕೂಲವಾಗಲಿದೆ. ಇದರಿಂದಾಗಿ ಸಣ್ಣ – ಪುಟ್ಟ ಎಪಿಎಂಸಿ ವರ್ತಕರೂ ಬೀದಿಗೆ ಬೀಳಲಿದ್ದಾರೆ.
3. ಎಪಿಎಂಸಿ ಕಾಯಿದೆ ತಿದ್ದುಪಡಿಯಿಂದ ರೈತರಿಗೆ ಕೃಷಿ ಉತ್ಪನ್ನ ಮಾರಾಟವಾದ ತಕ್ಷಣ ಹಣ ಸಿಗುವುದು ಅನುಮಾನ
4. ಎಪಿಎಂಸಿ ಮಾರುಕಟ್ಟೆಗಳು ದುರ್ಬಲವಾಗಲಿವೆ.
5. ಮೊನ್ನೆಯಷ್ಟೇ ಆತ್ಮನಿರ್ಭರ್ ಎಂಬ ಸ್ವಾಭಿಮಾನಿ ಮಂತ್ರ ಪಠಿಸಿದ ಮೋದಿಯವರೇ, ಈ ಹೊಸ ಕಾಯಿದೆಯಿಂದ ಇಂದುಸ್ವಾಭಿಮಾನಿ ರೈತರನ್ನು ಬಹುರಾಷ್ಟ್ರೀಯ ಕಂಪೆನಿಗಳ ಹಿಡಿತಕ್ಕೆ ಸಿಲುಕುವಂತೆ ಮಾಡಿದ್ದಾರೆ.
ಎಪಿಎಂಸಿ ಕಾಯಿದೆಯ ತಿದ್ದುಪಡಿಗಾಗಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರ ಅನುಮೋದನೆ ಪಡೆಯಲು ಹೋಗಿ ಛೀಮಾರಿ ಹಾಕಿಸಿಕೊಂಡಿದ್ದ ರಾಜ್ಯ ಸರ್ಕಾರ, ಈಗ ಕೊರೋನಾ ಸಂಕಷ್ಟದಲ್ಲಿಯೂ ತರಾತುರಿಯಲ್ಲಿ ಹೊಸ ಕಾಯಿದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ ಪಡೆದು, ಮತ್ತೊಮ್ಮೆ ರಾಜ್ಯಪಾಲರ ಒಪ್ಪಿಗೆ ಪಡೆಯಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರೈತರ ಜುಟ್ಟನ್ನು ಬಹುರಾಷ್ಟ್ರೀಯ ಕಂಪೆನಿಗಳ ಕೈಗೆ ಕೊಡಲು ರಾಜ್ಯ ಸರ್ಕಾರಕ್ಕೆ ಇಷ್ಟೊಂದು ಆತುರವೇಕೆ?
ಕೃಷಿ ಮಾರುಕಟ್ಟೆಯು ರಾಜ್ಯಗಳ ವಿಚಾರವಾದ್ದರಿಂದ ಕೇಂದ್ರ ಸರಕಾರ ಮಧ್ಯಪ್ರವೇಶಿಸಕೂಡದು. ಆದರೆ, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದಿರುವ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕದ ರೈತರ ಹಿತವನ್ನು ಬಲಿಕೊಡಲು ಮುಂದಾಗಿದೆ. ಈ ಹಿಂದೆ ಮಹರಾಷ್ಟ್ರದಲ್ಲಿ ಫಡ್ನವೀಸ್ ಸರ್ಕಾರ, ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲು ಮುಂದಾದಾಗ, ಅಲ್ಲಿನ ರೈತರ ಪ್ರತಿಭಟನೆಗೆ ಮಣಿದು ತಿದ್ದುಪಡಿ ಪ್ರಸ್ತಾಪವನ್ನು ಕೈ ಬಿಟ್ಟಿತ್ತು.
ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು, ರೈತರಿಗೆ ಮಾರಕವಾಗಿರುವ ಈ ಎಪಿಎಂಸಿ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಲಿ ಎಂದು ಆಗ್ರಹಿಸುತ್ತೇನೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…