ಶಹಾಪುರ : ಕಳೆದ ಐದಾರು ದಿನಗಳಿಂದಾಚೆ ಮುಂಬಯಿಯಿಂದ ವಲಸೆ ಬಂದ ಕಾರ್ಮಿಕನ್ನೊಬ್ಬಗೆ ಕರೋನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕನ್ಯಾಕೊಳ್ಳೂರ ಇಡೀ ಗ್ರಾಮವೇ ಸಿಲ್ ಡೌನ್ ಮಾಡಲಾಗಿದೆ, ಈ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಹೃಷಿಕೇಶ್ ಭಗವಾನ್ ಸೊನಾವಣೆ ಅವರು ಭೇಟಿ ನೀಡಿ ಸುರಕ್ಷಿತಯ ಬಗ್ಗೆ ಪರಿಶೀಲಿಸಿದರು.
ಕರೋನಾ ವೈರಸ್ ಪೊಸೆಟಿವ್ ಬಂದ ವ್ಯಕ್ತಿ ಇಡೀ ಗ್ರಾಮದಲ್ಲೆಲ್ಲ ಓಡಾಟ ಮಾಡಿದ್ದರಿಂದ ಸುಮಾರು 50 ಕ್ಕೂ ಹೆಚ್ಚು ಜನರ ಪ್ರಾಥಮಿಕ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದು ಬಂದಿದೆ ಆದ್ದರಿಂದ ಕನ್ಯಾಕೋಳೂರು ಗ್ರಾಮದಲ್ಲಿ ಈ ಪರಿಸ್ಥಿತಿ ಎದುರಾಗಿದ್ದು ಗ್ರಾಮದಲ್ಲಿ ಯಾವುದೇ ಕಾರಣಕ್ಕಾಗಿ ಮನೆಯಿಂದ ಯಾರು ಹೊರಗಡೆ ಬರಬಾರದು,ಒಂದು ವೇಳೆ ಬಂದರೆ ಕಟ್ಟುನಿಟ್ಟಿನ ಕಾನೂನಿನ ಕ್ರಮ ಕೈಗೊಳ್ಳಿ ಎಂದು ಪೋಲಿಸ್ ಸಿಬ್ಬಂದಿಗಳಿಗೆ ಸೂಚಿಸಿದರು.
ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಗ್ರಾಮ ಸೀಲ್ ಡೌನ್ ಮಾಡಲಾಗಿದ್ದು ಇದಕ್ಕೆ ಸಾರ್ವಜನಿಕರು ಸಹಕರಿಸಿ, ಮನೆಯಲ್ಲಿದ್ದರೂ ಕೂಡ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ,ಯಾವುದೇ ಸಂದರ್ಭದಲ್ಲಿ ಬೇಜವಾಬ್ದಾರಿತನ ತೋರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ,ಸಿಪಿಐ ಹನುಮರೆಡ್ಡೆಪ್ಪ,ಪಿಎಸ್ಐ ಸಿದ್ದೇಶ್ವರ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೀರೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…