ಸುರಪುರ: ತಾಲೂಕಿನ ದೇವತ್ಕಲ್ ಗ್ರಾಮದ ಬಳಿಯ ಜಮೀನೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಹಾಗು ಭತ್ತದ ಹುಲ್ಲಿನ ಬಣವೆ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಮದ್ಹ್ಯಾನ ನಡೆದಿದೆ.ಹಳ್ಳದಲ್ಲಿನ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದು ಅಲ್ಲೆ ಪಕ್ಕದ ಗಾಣಿಕೇರಿ ದೊಡ್ಡಿಯ ಸಿದ್ದಪ್ಪ ನವದಗಿ ಎಂಬುವವರ ಜಮೀನಿನಲ್ಲಿಯ ಗುಡಿಸಲಿಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಆಹಾರ ಧಾನ್ಯಗಳಾದ ಅಕ್ಕಿ ಜೋಳ ಮತ್ತು ಭತ್ತದ ಚೀಲಗಳು ಸುಟ್ಟು ಭಸ್ಮವಾಗಿವೆ.
ಗುಡಿಸಲಲ್ಲಿದ್ದ ಜಮೀನಿನ ದಾಖಲೆ ಪತ್ರಗಳು,ಆಧಾರ ಕಾರ್ಡ್,ರೇಶನ್ ಕಾರ್ಡ್ ಸೇರಿದಂತೆ ಅನೇಕ ದಾಖಲೆಗಳು ಹಾಗು 10 ಗ್ರಾಂ ಬಂಗಾರ ಮತ್ತು 40 ಸಾವಿರ ನಗದು ಹಣ ಸುಟ್ಟು ಹೋಗಿವೆ ಎಂದು ಕುಟುಂಬಸ್ಥ ಸಿದ್ದಪ್ಪ ನವದಗಿ ಅಳಲು ತೋಡಿಕೊಂಡಿದ್ದಾರೆ.ಅಲ್ಲದ ಇವರ ಜಮೀನಿನ ಪಕ್ಕದಲ್ಲಿದ್ದ ಕೃಷ್ಣಪ್ಪ ಎಂಬುವವರಿಗೆ ಸೇರಿದ ಭತ್ತದ ಹುಲ್ಲಿನ ಬಣವೆಯೂ ಸುಟ್ಟು ಹೋಗಿದ್ದು ಜಾನುವಾರುಗಳಿಗೆ ಮೇವು ಇಲ್ಲ ಎಂದು ಕೃಷ್ಣಪ್ಪ ಕೂಡ ತಮ್ಮ ನೋವು ತೋಡಿಕೊಂಡಿದ್ದಾರೆ.
ಸಂಜೆಯ ವರೆಗೂ ಘಟನೆ ನಡೆದ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಬಾರದಿರುವ ಬಗ್ಗೆ ಜನರು ಬೇಸರ ವ್ಯಕ್ತಪಡಿಸಿದ್ದು,ಸರಕಾರ ಬಡ ಕುಟುಂಬಸ್ಥರಿಗೆ ಮನೆ ನಿರ್ಮಿಸಿ ಕೊಡಬೇಕು ಮತ್ತು ಜಾನುವಾರುಗಳಿಗೆ ಮೇವು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…