ರಾಯಚೂರ ನೂತನ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಲು ನಾಯಕ ಸಂಘ ಮನವಿ

0
40

ಸುರಪುರ: ರಾಯಚೂರಿಗೆ ನೂತನವಾಗಿ ಮಂಜೂರಾಗಿರುವ ವಿಶ್ವ ವಿದ್ಯಾಲಯಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಎಂದು ನಾಮಕರಣ ಮಾಡುವಂತೆ ಶ್ರೀ ಮಹರ್ಷಿ ವಾಲ್ಮೀಕಿ ಬೇಡರ (ನಾಯಕ) ಸಂಘದ ಹುಣಸಗಿ ತಾಲೂಕು ಅಧ್ಯಕ್ಷ ಬಸಣ್ಣ ಜಿರಾಳ ಮಾತನಾಡಿದರು.

ಕಕ್ಕೇರಾ ನಾಡ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಸಾಮಕೇತಿಕ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಯಾದಗಿರಿ ಮತ್ತು ರಾಯಚೂರು ಜಿಲ್ಲೆಯನ್ನೊಳಗೊಂಡ ರಾಯಚೂರು ವಿಶ್ವವಿದ್ಯಾಲಯ ಆರಂಭಗೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದೆ.ಶ್ರೀ ಮಹರ್ಷಿ ವಾಲ್ಮೀಕಿ ಜಗತ್ತು ಮೆಚ್ಚುವಂತಹ ರಾಮಾಯಣ ಎಂಬ ಮಹಾನ್ ಗ್ರಂಥದ ಕರ್ತೃವಾಗಿದ್ದು,ಅಲ್ಲದೆ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ನಾಯಕ ಸಮುದಾಯದ ಜನಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದ್ದು,ದೇಶದ ಸ್ವಾತಂತ್ರ್ಯಕ್ಕಾಗಿ ನಾಯಕ ಸಮುದಾಯ ದೊಡ್ಡ ಕೊಡುಗೆಯನ್ನು ನೀಡಿದೆ.ಈ ಎಲ್ಲಾ ಕಾರಣಗಳಿಂದಾಗಿ ನೂತನವಾಗಿ ಆರಂಭಿಸಲಿರುವ ರಾಯಚೂರಿನ ವಿಶ್ವವಿದ್ಯಾಲಯಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

Contact Your\'s Advertisement; 9902492681

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಕಕ್ಕೇರಾ ಉಪ ತಹಸೀಲ್ದಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹಣಮಂತ್ರಾಯ ಹೊರಹಟ್ಟಿ ಮುಖಂಡರಾದ ವೀರಭದ್ರಪ್ಪ, ಮದನಪ್ಪ,ಹಣಮಂತ್ರಾಯ, ಬಸವರಾಜ,ವೀರಣಗೌಡ,ರಮೇಶ,ಪರಶುರಾಮ ಸಿದ್ದಾಪುರ,ರಾಜು,ಸಾಯಿಬಣ್ಣ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here