ಶಹಾಪುರ : ಖಾಲಿ ಕೊಡಗಳೊಂದಿಗೆ ಕುಡಿಯುವ ನೀರಿಗಾಗಿ ದಿಢೀರನೆ ಹತ್ತಿಗೂಡುರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿನೆ ಹಮ್ಮಿಕೊಳ್ಳಲಾಗಿತ್ತು.
ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಭರವಸೆಯನ್ನು ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿಕೊಂಡರು.ಬೇಸಿಗೆಯಾಗಿರುವುದರಿಂದ ಹತ್ತಿಗೂಡುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈಗಾಗಲೇ ಒಂದು ವಾರದ ಮುಂಚಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಮಸ್ಯೆಗಳ ಕುರಿತು ಮನವರಿಕೆ ಮಾಡಲಾಗಿತ್ತು. ಆದರೂ ಇಲ್ಲಿಯವರೆಗೆ ಯಾವುದೇ ರೀತಿಯ ಪ್ರಯೋಜನೆಯಾಗಿಲ್ಲ.
ಇಂದು ಅಧಿಕಾರಿಗಳ ಬೇಜವಾಬ್ದಾರಿತನದಿಂದ ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಯಿತು ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಶರಣುರಡ್ಡಿ ಹತ್ತಿಗೂಡೂರ ಹೇಳಿದರು.ಈ ಸಂದರ್ಭದಲ್ಲಿ ತಿಪ್ಪಣ್ಣ ಗಂಟಿ ಶೇಖಪ್ಪ ಹೊಸಮನಿ ಹಣಮಂತ ಹೊಸಮನಿ ಬಾಗಪ್ಪ ರತ್ತಾಳ ರಾಜಪ್ಪ ಹೊಸಮನಿ ಮಲ್ಲಪ್ಪ ಕನಕಗಿರಿ ಸುಭಾಷ್ ಕನ್ಯಾ ಕೊಳ್ಳೂರ ಶರಣು ಗ್ಯಾಂಗಿನ ಮಲ್ಲಪ್ಪ ಗೌಡಿ ಮಾನಪ್ಪ ಯರಗಲ್ ಶರಣಪ್ಪ ಗ್ಯಾಂಗ್ ದೇವಪ್ಪ ರತ್ತಾಳ ಹೊನ್ನಪ್ಪ ರವಿ ಕನಕಗಿರಿ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…