ಕಲಬುರಗಿ: ಮಹಾರಾಷ್ಟ್ರ ರಾಜ್ಯ ಪ್ರವಾಸ ಹಿನ್ನೆಲೆಯ 5 ಮತ್ತು ಆಂಧ್ರಪ್ರದೇಶ ಪ್ರವಾಸ ಹಿನ್ನೆಲೆಯ ಓರ್ವ ವ್ಯಕ್ತಿ ಸೇರಿದಂತೆ ಜಿಲ್ಲೆಯ 6 ಜನ ವಲಸಿಗರಲ್ಲಿ ರವಿವಾರ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.
ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಯಡ್ರಾಮಿ ತಾಲೂಕಿನ ಅಲ್ಲಾಪುರ ಗ್ರಾಮದ 32 ವರ್ಷದ ಯುವಕ (P-1965) ಮತ್ತು ಸುಂಬಡ ಗ್ರಾಮದ 20 ವರ್ಷದ ಯುವಕನಿಗೆ (P-1966) ಕೊರೋನಾ ಸೋಂಕು ಕಂಡುಬಂದಿದೆ.
ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯಿಂದ ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮದ ಬಳಿಯ ಕುದಮೂಡ್ ತಾಂಡಾದ 48 ವರ್ಷದ ಪುರುಷ(P-1967) ಮತ್ತು ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ 50 ವರ್ಷದ ಮಹಿಳೆಗೂ (P-1968) ಕೊರೋನಾ ಸೋಂಕು ಅಂಟುಕೊಂಡಿದೆ.
ಇದಲ್ಲದೆ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯಿಂದ ಕಲಬುರಗಿ ನಗರದ ತಾಜ್ ಸುಲ್ತಾನಪೂರ ರಿಂಗ್ ರಸ್ತೆಯ ನಿಜಾಮಪುರದ ಲಂಗರ್ ಹನುಮಂತ ನಗರದ 45 ವರ್ಷದ ವ್ಯಕ್ತಿ (P-2000) ಮತ್ತು ಆಂಧ್ರ ಪ್ರದೇಶ ಪ್ರವಾಸ ಹಿನ್ನೆಲೆಯಿಂದ ಕಲಬುರಗಿ ನಗರದ ಹೊಸ ಘಾಟಗೆ ಲೇಔಟ್ ಪ್ರದೇಶದ 30 ವರ್ಷದ ಯುವಕನಿಗೂ (P-2001) ಮಹಾಮಾರಿ ಸೋಂಕು ತಗುಲಿದೆ.
ಸೋಂಕಿತ ಆರು ಜನ ಸರ್ಕಾರಿ ಕ್ವಾರಂಟೈನ್ ಸೆಂಟರ್‌ನಲ್ಲಿದ್ದವರಾಗಿದ್ದು, ಸೋಂಕು ದೃಢವಾದ ನಂತರ ಅವರೆಲ್ಲರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 141 ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 62 ಜನ ಗುಣಮುಖರಾಗಿದ್ದಾರೆ. ಉಳಿದಂತೆ 7 ಜನರು ನಿಧನಹೊಂದಿದ್ದು, 72 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ.ಶರತ್ ಬಿ. ಮಾಹಿತಿ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…