ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಲಿ: ತುಳಜಾರಾಮ

1
80

ಶಹಾಬಾದ: ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮೇ ೨೬ ರಂದು ಆನ್‌ಲೈನ್ ಚಳುವಳಿಯನ್ನು ಹಮ್ಮಿಕೊಂಡಿದ್ದೆವೆ ಎಂದು ಎಐಡಿಎಸ್‌ಓ ನಗರ ಅಧ್ಯಕ್ಷ ತುಳಜಾರಾಮ.ಎನ್.ಕೆ ತಿಳಿಸಿದ್ದಾರೆ.

ದೇಶದ ಅಸಂಖ್ಯಾತ ವಿದ್ಯಾರ್ಥಿಗಳು ದಿನಗೂಲಿಗಾಗಿ ದುಡಿಯುವ ರೈತ -ಕೂಲಿ ಕಾರ್ಮಿಕರ ಮಕ್ಕಳು ಇಂದು ಅವರು ಅತ್ಯಂತ ಸಂಕಷ್ಟದಲ್ಲಿದ್ದು, ಜೀವನ ನಡೆಸಲು ದಿಕ್ಕೇ ತೋಚದಂತಾಗಿದೆ. ಇಂತಹ ಪರಿಸ್ಥಿಯಲ್ಲೂ ಕೆಲವು ಸರ್ಕಾರಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವುದು ಅತ್ಯಂತ ಅಮಾನವೀಯ ನಡೆಯಾಗಿದೆ. ಹಾಗೂ ಬಡ-ಮಧ್ಯಮ ವಿದ್ಯಾರ್ಥಿಗಳಿಗೆ, ಶಾಲಾ ಕಾಲೇಜುಗಳ ಶುಲ್ಕ-ಸಾರಿಗೆ ವ್ಯವಸ್ಥೆ-ಹಾಸ್ಟೆಲ್‌ಗಳ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಅನೇಕ ಶೈಕ್ಷಣಿಕ ಸಮಸ್ಯೆಗಳು ಎದುರಾಗುತ್ತಿವೆ.

Contact Your\'s Advertisement; 9902492681

ಈ ನಿಟ್ಟಿನಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಂತೆ ಮತ್ತು ವಿದ್ಯಾರ್ಥಿ-ಪರವಾದ ಕ್ರಮಗಳನ್ನು ಕೈಗೊಳ್ಳುವಂತೆ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ವತಿಯಿಂದಮೇ ೨೬ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಆಗ್ರಹ ದಿನಕ್ಕೆ ಕರೆ ನೀಡಿ, ಆನ್‌ಲೈನ್ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here