ಹೊಸಪೇಟೆ: ಇಲ್ಲಿನ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳು ವಿಷ ಸೇವಿಸಿದ ಪರಿಣಾಮ ನಿಲ್ದಾಣದಲ್ಲಿ ಸಾವನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಅಶ್ವಿನಿ (22) ಮೃತಪಟ್ಟ ಯುವತಿ. ಕೊಪ್ಪಳ ಜಿಲ್ಲೆಯ ಕನಕಗಿರಿ ಮೂಲದ ನಿವಾಸಿ ಎಂದು ತಿಳಿದು ಬಂದಿದ್ದು, ಕಳೇದ ಭಾನುವಾರ ಬಳ್ಳಾರಿಗೆ ಆಗಮಿಸಿ ಖಾಸಗಿ ಹೋಟಲ್ ಒಂದರಲ್ಲಿ ಒಳಿದುಕೊಂಡಿದ್ದರು ಎನ್ನಲಾಗಿದೆ. ಬೆಳಗ್ಗೆ ಬಸ್ ನಿಲ್ದಾಣಕ್ಕೆ ಬಂದು ಕುಳಿತಿದ್ದಾಳೆ. ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದು ನರಳಾಡಲು ಶುರು ಮಾಡಿದ್ದಾಗ, ಸ್ಥಳದಲಿದ್ದವರು ತಕ್ಷಣ ಆಕೆಯನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅಶ್ವಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಮೃತ ಅಶ್ವಿನಿ ಹೋಟೆಲ್ ರೂಮಿನಿಂದ ಬರುವಾಗಲೇ ವಿಷ ಸೇವಿಸಿದ್ದಳಾ ಅಥವಾ ಬಸ್ ನಿಲ್ದಾಣಕ್ಕೆ ಬಂದು ಕುಡಿದಿದ್ದಾಳ ಎಂದು ತಿಳಿದು ಬಂದಿಲ್ಲ. ಸಾವಿಗೆ ನಿಖರವಾಗಿ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಸ್ಥಳಕ್ಕೆ ಹೊಸಪೇಟೆ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.