ಕಲಬುರಗಿ: ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನವು ಲಾಕ್ ಡೌನ್ ನಂತರ ಪ್ರಥಮ ಬಾರಿಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೂಸ್ಪರ್ಶ ಮಾಡಿತು.
ಬೆಳಿಗ್ಗೆ 8-40 ಗಂಟೆಗೆ 25 ಜನ ಯಾತ್ರಿಕರನ್ನು ಕರೆದುಕೊಂಡು ಹೊರಟ ವಿಮಾನ 9.30 ಗಂಟೆಗೆ ಕಲಬುರಗಿ ನೆಲದಲ್ಲಿ ಲ್ಯಾಂಡ್ ಮಾಡಿತು. ತದನಂತರ 10.20 ಗಂಟೆಗೆ ಇಲ್ಲಿಂದ 20 ಪ್ರಯಾಣಿಕರನ್ನು ಕರೆದುಕೊಂಡು ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿತು.
ದೇಶಿಯ ವಿಮಾನಯಾನ ಸೇವೆಗೆ ಕೆಲ ದಿನಗಳ ಹಿಂದೆ ವಿಮಾನಯಾನ ಸಚಿವಾಲಯ ಹಸಿರು ನಿಶಾನೆ ತೋರಿದ ಪರಿಣಾಮ ಸೋಮವಾರದಿಂದ (ಮೇ-25) ದೇಶದಾದ್ಯಂತ ಕೊರೋನಾ ಹರಡದಂತೆ ಸುರಕ್ಷತಾ ಕ್ರಮದೊಂದಿಗೆ ವಿಮಾನಯಾನ ಸಂಚಾರವು ಆರಂಭಗೊಂಡಿದೆ.
ಭಾರತೀಯ ವಿಮಾನಯಾನ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೋಗುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಪ್ರತಿ ಪ್ರಯಾಣಿಕನಿಂದ ಅರೋಗ್ಯದ ಬಗ್ಗೆ ಸ್ವಯಂ ದೃಢೀಕರಣ ಪಡೆದುಕೊಳ್ಳಲಾಗುತ್ತಿದೆ. ಆರೋಗ್ಯ ಸೇತು ಆ್ಯಪ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಪ್ರಯಾಣಿಕರ ಲಗೇಜ್‍ಗಳನ್ನು ಡಿಸಿನ್ಫೆಕ್ಟ್ ಮಾಡಿಯೆ ವಿಮಾನಕ್ಕೆ ಹತ್ತಿಸಲಾಗುತ್ತದೆ. ಇನ್ನು ಬೆಂಗಳೂರಿನಿಂದ ಬರುವ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಲಾಗುವುದಲ್ಲದೆ ಎಲ್ಲರ ವಿವರವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದರು.
ಇಂದಿನಿಂದ ಸ್ಟಾರ್ ಏರ್ ಸಂಸ್ಥೆಯು ತನ್ನ ವಿಮಾನ ಸಂಚಾರ ಸೇವೆ ಅರಂಭಿಸಿದ್ದು, ಅಲಾಯನ್ಸ್ ಏರ್ ಸಹ ಶೀಘ್ರದಲ್ಲಿಯೆ ಸೇವೆ ಆರಂಭಿಸಲಿದೆ ಎಂದು ಜ್ಣಾನೇಶ್ವರ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…