ಕಲಬುರಗಿಯಲ್ಲಿ ಕೊರೋನಾ ಸೋಂಕಿನಿಂದ 10 ಜನ ಗುಣಮುಖ

ಕಲಬುರಗಿ: ಸೋಮವಾರ ಆರೋಗ್ಯ ಇಲಾಖೆಯ ಬೆಳಗಿನ ಬುಲೆಟಿನ್ ಪ್ರಕಟವಾಗಿದ್ದು, ಕಲಬುರಗಿ‌ ನಗರದ ಮೋಮಿನಪುರ ಪ್ರದೇಶದ 9 ಮತ್ತು ಮಿಜಗುರಿ ಪ್ರದೇಶದ ಓರ್ವ ವ್ಯಕ್ತಿ ಸೇರಿದಂತೆ ಕೋರೋನಾ ಪೀಡಿತ ಒಟ್ಟು 10 ಜನ‌ ಸೋಂಕಿನಿಂದ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ಕಲಬುರಗಿ ನಗರದ ಮೋಮಿನಪುರ ಪ್ರದೇಶದ 35 ವರ್ಷದ ಯುವಕ (P-848),  30 ವರ್ಷದ ಮಹಿಳೆ (P-953), 33 ವರ್ಷದ ಮಹಿಳೆ (P-1080), 15 ವರ್ಷದ ಬಾಲಕಿ (P-1081), 14 ವರ್ಷದ ಬಾಲಕಿ (P-1082), 55 ವರ್ಷದ ಮಹಿಳೆ (P-1083), 50 ವರ್ಷದ ಮಹಿಳೆ (P-1085), 60 ವರ್ಷದ ವೃದ್ಧ (P-1086), 10 ವರ್ಷದ ಬಾಲಕಿ (P-1087) ಹಾಗೂ ಮಿಜಗುರಿ ಪ್ರದೇಶದ 38 ವರ್ಷದ ಯುವಕ (P-849) ಸೋಂಕಿನಿಂದ ವಾಸಿಯಾಗಿ ಬಿಡುಗಡೆಗೊಂಡವರು.

ಜಿಲ್ಲೆಯಲ್ಲಿ ಇದೂವರೆಗಿನ ಕೊರೋನಾ‌ ಪೀಡಿತ 155 ಜನರಲ್ಲಿ 72 ಜನ ಗುಣಮುಖರಾಗಿದ್ದಾರೆ. 7 ಜನ‌ ನಿಧನ ಹೊಂದಿದ್ದು, 76 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ವಿವರಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

5 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

8 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

13 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

15 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420