ಹೋಂ ಕ್ವಾರಂಟೈನ್ ಉಲ್ಲಂಘಿಸಿದಲ್ಲಿ ಎಫ್.ಐ.ಆರ್ ದಾಖಲು: ಡಿ.ಸಿ. ಎಚ್ಚರಿಕೆ

0
115

ಕಲಬುರಗಿ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದಲ್ಲಿ ಅಂತಹವರ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳನ್ನು, ಹೊರ ರಾಜ್ಯದಿಂದ ಬಂದ ಗರ್ಭಿಣಿ ಮಹಿಳೆಯರು, 10 ವರ್ಷದೊಳಗಿನ ಮಕ್ಕಳು, 65ವರ್ಷ ಮೇಲ್ಪಟ್ಟ ಹಿರಿಯರು & ಇನ್ನಿತರ ರೋಗಗಳಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ.

Contact Your\'s Advertisement; 9902492681

ಆದರೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೆ ಅಂತವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ತದನಂತರ‌ವು ಮೇಲಿಂದ‌ ಮೇಲೆ ಇದೇ ರೀತಿ ತಪ್ಪು ಮರುಕಳುಹಿಸಿದಲ್ಲಿ ಅಂತಹವರ ಮೇಲೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here