ಕಲಬುರಗಿ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದಲ್ಲಿ ಅಂತಹವರ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳನ್ನು, ಹೊರ ರಾಜ್ಯದಿಂದ ಬಂದ ಗರ್ಭಿಣಿ ಮಹಿಳೆಯರು, 10 ವರ್ಷದೊಳಗಿನ ಮಕ್ಕಳು, 65ವರ್ಷ ಮೇಲ್ಪಟ್ಟ ಹಿರಿಯರು & ಇನ್ನಿತರ ರೋಗಗಳಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ.
ಆದರೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೆ ಅಂತವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ತದನಂತರವು ಮೇಲಿಂದ ಮೇಲೆ ಇದೇ ರೀತಿ ತಪ್ಪು ಮರುಕಳುಹಿಸಿದಲ್ಲಿ ಅಂತಹವರ ಮೇಲೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…