ಸುರಪುರ: ರಾಜ್ಯದಲ್ಲಿ ಕೊರೊನಾ ಲಾಕ್‍ಡೌನ್ ಮತ್ತು ಬರಗಾಲದ ಹೊಡೆತದಿಂದ ರೈತ ಕಂಗಾಲಾಗಿದ್ದು,ಇಂತಹ ಸಂದರ್ಭದಲ್ಲಿ ಸರಕಾರ ರೈತರಿಂದ ಸಾಲ ವಸೂಲಾತಿ ಕೈಬಿಟ್ಟು ಎಲ್ಲಾ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಒತ್ತಾಯಿಸಿದರು.
ನಗರದ ಎಪಿಎಂಸಿ ಗಂಜ್ ಆವರಣದಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮುಂದೆ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ ಇಂದು ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು ಇದರಿಂದ ರೈತರ ಬದುಕಿನ ಮೇಲೆ ಬರೆ ಎಳೆದಂತಾಗಲಿದೆ.ಸರಕಾರ ಈಗಿರುವ ಕಾಯ್ದೆ ತಿದ್ದುಪಡಿಗೆ ಮುಂದಾಗುವ ಮೂಲಕ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಸರಕಾರ ನಡೆಸಿದೆ.ಇದನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸುತ್ತದೆ ಎಂದರು.
ರೈತರಿಗೆ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಬೇಕು ಹಾಗು ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ಜನರಿಗೆ ದುಡಿಯಲು ಕೆಲಸವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ.ಆದ್ದರಿಂದ ಎಲ್ಲಾ ರೈತ ಮತ್ತು ಕಾರ್ಮಿಕ ಕುಟುಂಬಗಳಿಗೆ ಉಚಿತ ಪಡಿತರ ಹಾಗು ಅಗತ್ಯ 16 ವಸ್ತುಗಳ ವಿತರಣೆ ಮಾಡಬೇಕೆಂದು ಆಗ್ರಹಿಸಿದರು.
ಅಲ್ಲದೆ ಡಾ: ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು.ರೈತರು ಬೆಳೆದ ಬೆಳಯನ್ನು ಖರ್ಚಿನ ಮೊತ್ತಕ್ಕಿಂತ ಶೇ 50 ಲಾಭ ಸೇರಿಸಿದ ದರದಲ್ಲಿ ಸರಕಾರ ಖರೀದಿ ಮಾಡಬೇಕು.ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಕಡಿಮೆಗೊಳಿಸಬೇಕು.ಲಾಕ್‍ಡೌನ್ ಅವಧಿಯಿಂದ ಸಂಕಷ್ಟಕ್ಕೀಡಾಗಿರುವ ಎಲ್ಲಾ ರೈತ ಮತ್ತು ಕಾರ್ಮಿಕರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ಧನ ನೀಡಬೇಕು,ಪಿಎಂ ಕಿಸಾನ್ ಯೋಜನೆಯ ಮೊತ್ತ 18 ಸಾವಿರಕ್ಕೆ ಏರಿಸಬೇಕೆಂದು ಆಗ್ರಹಿಸಿದರು.ಲಾಕ್‍ಡೌನ್ ಅವಧಿಯಲ್ಲಿ ಆತ್ಮಹತ್ಯೆಗೀಡಾದ ರೈತ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಕಚೇರಿಯ ಕಾರ್ಯದರ್ಶಿ ಸುರೇಶ ಬಾಬು ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ದವಲಸಾಬ್ ನದಾಫ್,ರೈತ ಸಂಘದ ತಾಲೂಕಾಧ್ಯಕ್ಷ ಧರ್ಮಣ್ಣ ದೊರೆ,ರಾಜು ದೊಡ್ಮನಿ,ಶರಣಬಸವ ಜಂಬಲದಿನ್ನಿ,ಖಾಜಾಸಾಬ್ ದಳಪತಿ,ಕೃಷ್ಣಾ ನಾಯ್ಕ್,ಸಿದ್ದಮ್ಮ ಭಜಂತ್ರಿ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…