ಸುರಪುರ: ಇಂದು ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು ಇದರಿಂದ ರೈತರನ್ನು ಸಂಕಷ್ಟಕ್ಕೀಡು ಮಾಡುವ ಹುನ್ನಾರ ಸರಕಾರ ನಡೆಸಿದೆ.ಇದನ್ನು ಕರ್ನಾಟಕ ರಾಜ್ಯ ರೈತ ಸಂಘ ಬಲವಾಗಿ ಖಂಡಿಸುತ್ತದೆ.ರೈತ ವಿರೋಧಿ ಕಾಯ್ದೆಗಳ ತಿದ್ದುಪಡಿ ಕೂಡಲೆ ಕೈ ಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗಿಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದರು.
ಸಂಘದ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ರಾಜ್ಯದಲ್ಲಿ ಕೊರೊನಾ ಲಾಕ್‍ಡೌನ್ ಮತ್ತು ಬರಗಾಲದ ಬೇಗೆಯಿಂದ ರೈತ ತತ್ತರಿಸಿದ್ದು ಸರಕಾರ ರೈತರ ಸಾಲ ವಸೂಲಾತಿ ಕೈಬಿಟ್ಟು ಎಲ್ಲಾ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು.ರೈತರಿಗೆ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಬೇಕು ಹಾಗು ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ಜನರಿಗೆ ದುಡಿಯಲು ಕೆಲಸವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ.ಆದ್ದರಿಂದ ಎಲ್ಲಾ ರೈತ ಮತ್ತು ಕಾರ್ಮಿಕ ಕುಟುಂಬಗಳಿಗೆ ಉಚಿತ ಪಡಿತರ ಹಾಗು ಅಗತ್ಯ ವಸ್ತುಗಳ ವಿತರಣೆ ಮಾಡಬೇಕೆಂದು ಆಗ್ರಹಿಸಿದರು.
ನಂತರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಬಸವರಾಜಪ್ಪಗೌಡ ಹೆಮ್ಮಡಗಿ,ರಾಜ್ಯ ಯುವ ಘಟಕದ ಸಂಚಾಲಕ ದೇವಿಂದ್ರಪ್ಪಗೌಡ ಮಾಲಗತ್ತಿ,ಮಲ್ಲಣ್ಣ ಹುಬ್ಬಳ್ಳಿ ಕುಂಬಾರಪೇಟೆ,ಸಿದ್ದಣ್ಣ ಕುಂಬಾರಪೇಟೆ,ಮಲ್ಕಣ್ಣ ಚಿಂತಿ ಮಂಡಗಳ್ಳಿ,ಯಲ್ಲಪ್ಪ ಗುಡ್ಡಾಕಾಯಿ,ನಾಗಪ್ಪ ಹೆಮ್ಮಡಗಿ,ಚನ್ನಪ್ಪ ನರಸಿಂಗಪೇಟೆ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…