ಸುರಪುರ: ಸೊಮವಾರ ರಾತ್ರಿ ಸುರಿದ ಅಕಾಲಿಕ ಮಳೆ ಗಾಳಿಗೆ ನಗರದ ಹಸನಾಪುರ ಬಳಿಯ ರಾಜಾ ಕುಮಾರ ನಾಯಕ ಕಾಲೋನಿಯಲ್ಲಿನ ಮನೆಗಳ ಚಾವಣಿಯ ತಗಡುಗಳು ಹಾರಿಹೋಗಿ ಅಪಾರ ಪ್ರಮಾಣದ ನಷ್ಟವುಂಟಾಗಿರುವ ಘಟನೆ ನಡೆದಿದೆ.
ಶಾಂತಮ್ಮ ರಾಮಣ್ಣ ಮ್ಯಾಕಲ್ ಹಾಗು ಆಶಪ್ಪ ಯಾದವ್ ಎಂಬುವವರ ಮನೆಗಳ ಚಾವಣಿಯ ತಗಡುಗಳು ಹಾರಿ ಹೋಗಿದ್ದರಿಂದ ಮನೆಯಲ್ಲಿದ್ದ ಟಿವಿ ಕಂಪ್ಯೂಟರ್ ಹಾಗು ಇತರೆ ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಧವಸ ದಾನ್ಯಗಳು ಹಾಗು ಬಟ್ಟೆ ಬರೆಗಳು ಸೇರಿದಂತೆ ಲಕ್ಷಾಂತರ ರೂಪಾಯಿಗಳ ವಸ್ತುಗಳು ನಾಶವಾಗಿವೆ.
ಶಾಂತಮ್ಮ ಮ್ಯಾಕಲ್ ಅವರ ಮನೆಯಲ್ಲಿ ಕಂಪ್ಯೂಟರ್ ರಿಪೇರಿ ಕೆಲಸ ಮಾಡುತ್ತಿರುವುದರಿಂದ ಅನೇಕರು ರಿಪೇರಿಗೆಂದು ತಂದಿದ್ದ ಕಂಪ್ಯೂಟರ್ ಲ್ಯಾಪಟಾಪ್ ವಸ್ತುಗಳು ಮಳೆಯ ನೀರಿಂದ ಹಾನಿಯಾಗಿವೆ ಎಂದು ಮಂಜುನಾಥ ಮ್ಯಾಕಲ್ ತಮ್ಮ ನೋವು ತೋಡಿಕೊಂಡಿದ್ದಾರೆ.
ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದ್ದರಿಂದ ಬಡವರಾದ ನಾವು ಏನು ಮಾಡುವುದೆಂದು ತೋಚದಾಗಿದೆ.ಸರಕಾರ ನಮ್ಮ ನೆರವಿಗೆ ಬರಬೇಕೆಂದು ವಿನಂತಿಸಿದ್ದಾರೆ.ಹಾನಿಗೀಡಾದ ಮನೆಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಕುರಿತು ಪರಿಶೀಲನೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…