ಬಿಸಿ ಬಿಸಿ ಸುದ್ದಿ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳ ವಿಚಾರವಾಗಿ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಮುಂದುವರಿಸಲು ಡಬ್ಲ್ಯೂಪಿಐ ಮನವಿ

ಕಲಬುರಗಿ: ಸಂವಿಧಾನದ 73ನೇ ತಿದ್ದುಪಡಿ ಮೂಲಕ ಆಡಳಿತ ವಿಕೇಂದ್ರೀಕರಣದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪಂಚಾಯ??ರಾಜ್ ವ್ಯವಸ್ಥೆಯನ್ನು ಇಡೀ ದೇಶಕ್ಕೆ ಮಾದರಿಯನ್ನಾಗಿ ತೋರಿಸಿಕೊಟ್ಟ ಕೀತರ್ಿ ಕನರ್ಾಟಕ ರಾಜ್ಯಕ್ಕೆ ಸಲ್ಲುತ್ತದೆ. ರಾಜ್ಯದ ಪಂಚಾಯ??ರಾಜ್ ವ್ಯವಸ್ಥೆಗೆ ತನ್ನದೇ ಆದ ಇತಿಹಾಸವಿದೆ. ಪ್ರಸ್ತುತ ಗ್ರಾಮ ಪಂಚಾಯಿತಿಗಳ ಐದು ವರ್ಷದ ಅವಧಿ ಮೇ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಕೆಲವೊಂದು ಪಂಚಾಯಿತಿಗಳ ಅವಧಿ ಜೂನ್ ಮತ್ತು ಜುಲೈನಲ್ಲಿ ಮುಗಿಯಲಿದೆ. ಒಟ್ಟಾರೆ, ಮೇ ಮತ್ತು ಜೂನ್ ತಿಂಗಳಲ್ಲಿ ರಾಜ್ಯದ 6,041 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ಆದರೆ, ಕೋವಿಡ್-19ನ್ನು ಕೇಂದ್ರ ಸಕರ್ಾರ ರಾಷ್ಟ್ರೀಯ ನೈಸಗರ್ಿಕ ವಿಕೋಪ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸಕರ್ಾರ ಇದನ್ನೇ ನೆಪ ಮಾಡಿಕೊಂಡು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಮುಂದಾಗಿದ್ದು, ಚುನಾವಣೆಯನ್ನು ಮುಂದೂಡುವ ಪ್ರಸ್ತಾವನೆಯನ್ನು ಘನ ರಾಜ್ಯ ಚುನಾವಣಾ ಅಯೋಗಕ್ಕೆ ಸಲ್ಲಿಸಿದೆ. ಈ ಮಧ್ಯೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಕೇಳಿ ತುತರ್ು ಸುತ್ತೋಲೆ ಹೊರಡಿಸಿದೆ.
ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಇಡೀ ಜಿಲ್ಲಾಡಳಿತಕ್ಕೆ ಬಿಡುವು ಇಲ್ಲದಂತಾಗಿದೆ ಎನ್ನುವುದು ವಾಸ್ತವ. ಆದರೆ, ಈ ಪರಿಸ್ಥಿತಿಯು ಚುನಾವಣೆ ಮುಂದೂಡಲಕ್ಕೆ ಕಾರಣವಾಗಬಾರದು. ಸಕರ್ಾರದ ಒತ್ತಡಕ್ಕೆ ಮಣಿದು ಅಥವಾ ಸಕರ್ಾರಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳು ಅಭಿಪ್ರಾಯ ನೀಡಬಾರದು ಎನ್ನುವುದು ವೆಲ್ಫೇರ್ ಪಾಟರ್ಿಯ ಒತ್ತಾಯವಾಗಿದೆ. ಒಂದೊಮ್ಮೆ ಚುನಾವಣೆ ಮುಂದೂಡುವ ಅನಿವಾರ್ಯ ಪರಿಸ್ಥಿತಿ ನಿಮರ್ಾಣವಾದರೆ ಆಡಳಿತ ಸಮಿತಿಯ ಬದಲು ಹಾಲಿ ಸದಸ್ಯರನ್ನು ಮುಂದುವರಿಸಲು ಸಕರ್ಾರಕ್ಕೆ ಶಿಫಾರಸು ಮಾಡಬೇಕು ಎಂಬುದು ನಮ್ಮ ಮನವಿಯಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಕನಿಷ್ಟ ಆರು ತಿಂಗಳು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡುವುದು ಅನಿವಾರ್ಯವಾಗಿದೆ ಎಂಬುದು ರಾಜ್ಯ ಸಕರ್ಾರದ ವಾದವಾಗಿದೆ. ಆದರೆ, ಇದಕ್ಕೆ ಪಯರ್ಾಯವಾಗಿ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವುದು ಸೂಕ್ತವಲ್ಲ. ಅಲ್ಲದೇ ಸಕರ್ಾರದ ಈ ಧೋರಣೆ ಸಂವಿಧಾನ ಮತ್ತು ಪಂಚಾಯ??ರಾಜ್ ಕಾಯ್ದೆಯ ಆಶಯಗಳಿಗೆ ತದ್ವಿರುದ್ಧವಾಗಿದೆ. ಸಕರ್ಾರದ ಈ ನಡೆಯನ್ನು ವೇಲ್ಫೇರ್ ಪಾಟರ್ಿ ತೀವ್ರವಾಗಿ ಖಂಡಿಸುತ್ತದೆ. ಆಡಳಿತ ಸಮಿತಿಯ ಸದಸ್ಯರ ನಾಮನಿದರ್ೇಶನದ ವಿಚಾರದಲ್ಲಿ ಕನರ್ಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯ??ರಾಜ್ ಕಾಯ್ದೆ-1993ರ ಕಲಂ 80 ಅನ್ನು ರಾಜ್ಯ ಸಕರ್ಾರ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ವಿಶ್ಲೇಷಿಸುತ್ತಿದೆ. ಅಲ್ಲದೇ ಕಲಂ 321ನ್ನು ಸಕರ್ಾರ ಸ್ಪಷ್ಟವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಕೋವಿಡ್-19 ನಿರ್ವಹಣೆ ದೃಷ್ಟಿಯಿಂದ ಗ್ರಾಮ ಪಂಚಾಯಿತಿಗಳಿಗೆ ಸಾಕಷ್ಟು ಹೊಣೆಗಾರಿಕೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಚುನಾಯಿತ ಆಡಳಿತ ವ್ಯವಸ್ಥೆಯನ್ನು ದುರ್ಬಲಗೊಳಿಸಿದರೆ ಅಥವಾ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಂತೆ ಮಾಡಿ ಅದರ ಬದಲಿಗೆ ಆಡಳಿತ ಸಮಿತಿ ಇಲ್ಲವೇ ಆಡಳಿತಾಧಿಕಾರಿಗಳ ವ್ಯವಸ್ಥೆ ಜಾರಿಗೆ ತಂದರೆ ಕೋವಿಡ್-19 ನಿರ್ವಹಣೆಗೆ ಸಮರ್ಪಕ ವ್ಯವಸ್ಥೆ ಇಲ್ಲದೆ ಗ್ರಾಮೀಣ ಪ್ರದೇಶಗಳು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದರಿಂದಾಗುವ ಸಮಸ್ಯೆ, ಅನಾನುಕೂಲತೆಗಳಿಗೆ ಸಕರ್ಾರವೇ ಹೊಣೆಯಾಗಬೇಕಾಗುತ್ತದೆ. ಮೇಲೆ ವಿವರಿಸಿದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಕನಿಷ್ಟ 6 ತಿಂಗಳ ಕಾಲ ಮುಂದೂಡಬೇಕು ಎಂಬ ರಾಜ್ಯ ಸಕರ್ಾರದ ಪ್ರಸ್ತಾವನೆಗೆ ಚುನಾವಣಾ ಆಯೋಗ ಮಾನ್ಯತೆ ಕೊಡಬಾರದು. ಒಂದೊಮ್ಮೆ ಚುನಾವಣೆ ಮುಂದೂಡುವುದು ಅನಿವಾರ್ಯವಾದಲ್ಲಿ ಆಡಳಿತ ಸಮಿತಿ ಸದಸ್ಯರು ಅಥವಾ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಬದಲು ಈಗಿರುವ ಚುನಾಯಿತ ಸದಸ್ಯರ ಅವಧಿಯನ್ನು 6 ತಿಂಗಳವರೆಗೆ ವಿಸ್ತರಿಸಬೇಕು. ಈ ವಿಚಾರದಲ್ಲಿ ಚುನಾವಣಾ ಆಯೋಗ ತನಗೆ ದತ್ತವಾಗಿರುವ ಸಂವಿಧಾನಬದ್ಧ ಹಾಗೂ ಶಾಸನಬದ್ಧ ಅಧಿಕಾರವನ್ನು ಚಲಾಯಿಸಬೇಕು ಜೊತೆಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುವ ಎಲ್ಲಾ ಅವಕಾಶಗಳ ಬಗ್ಗೆ ರಾಜ್ಯ ಸಕರ್ಾರ ಪ್ರಾಮಾಣಿಕ ಪರಿಶೀಲನೆ ನಡೆಸಬೇಕು. ಚುನಾವಣೆ ಮುಂದೂಡಿ ಆಡಳಿತ ಸಮಿತಿ ನೇಮಕ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಕರ್ಾರ ತಕ್ಷಣ ಕೈಬಿಡಬೇಕು ಎಂದು ವೇಲ್ಫೇರ್ ಪಾಟರ್ಿ ತಮ್ಮ ಮೂಲಕ ರಾಜ್ಯ ಸಕರ್ಾರವನ್ನು ಒತ್ತಾಯಿಸುತ್ತದೆ.
ವೆಲ್ಫೇರ್ ಪಾಟರ್ಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಸೈಯದ್ ಅಬ್ದುಲ್ ಬಾರಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಸಲೀಂ ಅಹ್ಮದ್ ಚಿತಾಪುರ, ಕಲಬುಗರ್ಿ ವಿಧಾನಸಭಾ ಕ್ಷೇತ್ರ ವೆಲ್ಫೇರ್ ಪಾಟರ್ಿ ಆಫ್ ಇಂಡಿಯಾದ ಅಧ್ಯಕ್ಷ ಮುಬಿನ್ ಅಹ್ಮದ್, ಮುಖಂಡ ಸೈಯದ್ ಮುನೀರ್ ಹಾಷ್ಮಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago