ಬಿಸಿ ಬಿಸಿ ಸುದ್ದಿ

ಪೌರಕಾರ್ಮಿಕರೊಂದಿಗೆ ಮಹಾನಗರಪಾಲಿಕೆ ಆಯುಕ್ತರ ಸಂವಾದ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರ ಯೋಗಕ್ಷೇಮ ಕುರಿತು ಕಲಬುರಗಿ ಮಹಾನಗರಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ಇತ್ತೀಚೆಗೆ ಕಲಬುರಗಿ ನಗರದ ಇಂದಿರಾ ಸ್ಮಾರಕ ಭವನದಲ್ಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಪ್ರತಿದಿನ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಸರಬರಾಜು ಮತ್ತು ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ನಗರದ ನೈರ್ಮಲೀಕರಣ ಕಾರ್ಯಕ್ಕೆ ಪೌರ ಕಾರ್ಮಿಕರಿಗೆ ನೀಡಲಾಗುವ ಸಾಧನ ಸಲಕರಣೆಗಳು ಆರೋಗ್ಯದ ಹಿತದೃಷ್ಠಿಯಿಂದ ತಪ್ಪದೇ ಉಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಕಲಬುರಗಿ ನಗರದ ನೈರ್ಮಲಿಕರಣಕ್ಕೆ ಹೆಚ್ಚು ಒತ್ತು ನೀಡುವುದು ಅಗತ್ಯವಿದ್ದು, ಸ್ವಚ್ಚ ನಗರವನ್ನಾಗಿಸಲು ಪೌರ ಕಾರ್ಮಿಕರು ಪಣ ತೊಡಬೇಕು. ಪೌರ ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಪಾಲಿಕೆ ಹಾಗೂ ಸಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.

emedialine

View Comments

  • ಹಿಂತಾ ಪ್ರಯತ್ನ ಮಾಡುವ ದಕ್ಷ ಅಧಿಕಾರಿಗಳಿಗೆ ಒಂದು ಸ್ಥಳದಲ್ಲಿ ಕೇಲವು ವರ್ಷಗಳ ಕಾಲ ಪ್ರಾಮಾಣಿಕ ಕೆಲಸ ಮಾಡುವ ಅವಕಾಶ ನೀಡಬೇಕು .... ಆಗ ಮಾತ್ರ ಅವರು ಹಾಕಿಕೊಂಡು ಯೋಚನೆಗಳು ಜಾರಿಗೆ ತರಲು ಸಾಧ್ಯವಾಗುತ್ತದೆ ಆದರೆ ಬಂದ ದಾರಿಗೆ ಸುಂಕ ವಿಲ್ಲದಂತೆ ಕೆಲವೇ ದಿನಗಳಲ್ಲಿ ವರ್ಗಾವಣೆ ಕೃಪೆ ....

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago