ಬಿಸಿ ಬಿಸಿ ಸುದ್ದಿ

ಸ್ವಾಮೀಜಿ ಮೇಲಿನ ಹಲ್ಲೆಗೆ ನಾಗಲಿಂಗಯ್ಯ ಖಂಡನೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲೂರ ತಾಲೂಕಿನ ರೇವೂರ (ಬಿ) ಗ್ರಾಮದ ಪೂಜ್ಯ ಶ್ರೀ ಶಿವಾನಂದ ಸ್ವಾಮೀಜಿಯವರ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಲಬುರಗಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ಸಕರ್ಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಹಲ್ಲೆ ನಡೆಸಿರುವ ಪೇದೆ ಶರಣಗೌಡ ಪಾಟೀಲ ರವರನ್ನು ಈಗಾಗಲೇ ಕಲಬುರಗಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ಶ್ರೀ ಯಡಾ ಮಾಟರ್ಿನ್ ಮರ್ಬನ್ಯಾಂಗ್ ರವರು ಅಮಾನತ್ತುಗೊಳಿಸಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ವಾಗಿದ್ದು ಆದರೆ ಪ್ರಕರಣದ ಬಗ್ಗೆ ಸಂಪೂರ್ಣವಾದ ತನಿಖೆ ಅಗತ್ಯವಿರುವುದರಿಂದ ಮುಗ್ಧ ಅಮಾಯಕ ಮತ್ತು ಅಂಗವಿಕಲರಾಗಿರುವ ಸ್ವಾಮೀಜಿಯವರ ಮೇಲೆ ಹಲ್ಲೆ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಯಾವ ತಪ್ಪು ಮಾಡದ ಸ್ವಾಮೀಜಿಯವರ ಮೇಲೆ ಮಾರಣಾಂತಿಕ ಹಲ್ಲೆ ಆದರೂ ಸಹ ಅಫಜಲಪೂರ ಸಿ.ಪಿ.ಐ. ರವರಾಗಲಿ, ಆಳಂದ ಡಿ.ವೈ.ಎಸ್.ಪಿ. ರವರಾಗಲಿ ಕ್ರಮ ಕೈಗೊಳ್ಳದೇ ಉದಾಸೀನತೆ ತೋರಿಸಿರುವುದು ಬೇಸರದ ಸಂಗತಿಯಾಗಿದ್ದು, ರಕ್ಷಕರೇ ಈ ರೀತಿ ದುಂಡಾವರ್ತನೆ ಮಾಡಿದರೆ ಹೇಗೆ ಎಂದು ಪ್ರಶ್ನಿಸಿರುವ ಅವರು ಒಂದು ವೇಳೆ ಸ್ವಾಮೀಜಿ ತಪ್ಪು ಮಾಡಿದರೆ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳುವುದು ಬಿಟ್ಟು ಪೇದೆ ಮನಸೋ ಇಚ್ಛೆ ಹೊಡೆದಿರುವುದು ಖಂಡನೀಯವಾಗಿದ್ದು ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ ಎನ್ನುವುದು ಇಂತಹ ಮನಸ್ಸುಗಳು ಅರ್ಥ ಮಾಡಿಕೊಳ್ಳಬೇಕು.

ಇದು ರಾಜಶಾಹಿ ವ್ಯವಸ್ಥೆ ಅಲ್ಲ. ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಶಂಕೆ ಇದ್ದು ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಕೈಗೊಳ್ಳುವಂತೆ ಕೋರಿ ರೇವೂರ (ಬಿ) ಪೊಲೀಸ ಠಾಣೆಯ ಪಿ.ಎಸ್.ಐ., ಅಫಜಲಪೂರ ಸಿ.ಪಿ.ಐ. ಹಾಗೂ ಆಳಂದ ಡಿ.ವೈ.ಎಸ್.ಪಿ. ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳನ್ನೂ ಸಹ ವಿಚಾರಣೆಗೊಳಪಡಿಸುವಂತೆ ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯದ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ನಿಯೋಗದ ಮೂಲಕ ಭೇಟಿಯಾಗಿ ಮನವಿ ಸಲ್ಲಿಸಲಾಗುವುದೆಂದು ಮಠಪತಿ ತಿಳಿಸಿದ್ದಾರೆ.

emedialine

View Comments

  • Мы можем предоставить любую запчасть взжатый срок непосредственно в пункт выдачи рынок автозапчастей : надежные автозапчасти.
    Кроме стремления предоставить большой комплект авто аксессуаров, наша фирма постоянно работа ведется над возможностью легких и быстрых закупок у нас в магазине. Из-за ассортимента характеристик и вариантов авто каждой марки, мы тут завели пошаговую схему заявки. Таковым методом, мы хотим избежать закупок и упущений неудобных автозапчастей.
    Выберите у нас авто завпчасти и дополнительно получайте скидку в цене на следующий заказ!

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago