ಸುರಪುರ: ಜೂನ್ 7ನೇ ತಾರೀಖಿನಂದು ನಡೆಯುವ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿರುವ ಪಕ್ಷ ಸಂಘಟನೆ ಕುರಿತ ಕಾರ್ಯಕ್ರಮಕ್ಕೆ ರಾಯಚೂರು ಗ್ರಾಮೀಣ ಭಾಗದ ಗಿಲ್ಲೆಸುಗೂರು ಬ್ಲಾಕ್ ಕಾಂಗ್ರೇಸ್ ಸಮಿತಿಗೆ ಉಸ್ತುವರಿಯನ್ನಾಗಿ ರಮೇಶ ದೊರೆ ಆಲ್ದಾಳ ಅವರನ್ನು ನೇಮಕಗೊಳಿಸಲಾಗಿದೆ.
ಈ ಕುರಿತು ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರು ನೇಮಕಾತಿ ಆದೇಶ ಹೊರಡಿಸಿದ್ದು,ಈಗಾಗಲೆ ಅನೇಕ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಶ್ರಮವಹಿಸಿದ ತಮಗೆ ಗಿಲ್ಲೆಸುಗೂರು ಬ್ಲಾಕ್ ಕಾಂಗ್ರೇಸ್ ಸಮಿತಿ ಜವಬ್ದಾರಿ ನೀಡಲಾಗಿದ್ದು,ಇಲ್ಲಿಯ ಮಾಜಿ ಸಂಸದರು,ಹಾಲಿ ಮತ್ತು ಮಾಜಿ ಶಾಸಕರು,ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು 7ನೇ ತಾರೀಖು ನಡೆಯುವ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ಸುಗೊಳಿಸಲು ಎಲ್ಲರ ವೀಕ್ಷಣೆಗಾಗಿ ಟಿ.ವಿ ಚಾನಲ್‍ಗಳಲ್ಲಿ ಪ್ರಸಾರ ವ್ಯವಸ್ಥೆ ಮಾಡಲಾಗಿದೆ.ಆದ್ದರಿಂದ ಬ್ಲಾಕ್ ಕಾಂಗ್ರೇಸ್‍ನ ಸಾಮಾಜಿಕ ಜಾಲತಾಣಗಳ ಕಾರ್ಯಕರ್ತರನ್ನು ತಿಡಗಿಸಿಕೊಂಡು ಎಲ್ಲರು ಕಾರ್ಯಕ್ರಮದ ವೀಕ್ಷಣೆಗೆ ಅನುಕೂಲ ಮಾಡಿಕೊಡಲು ತಿಳಿಸಿದ್ದಾರೆ.
ನನ್ನ ಮೇಲೆ ಭರವಸೆಯನ್ನಿಟ್ಟು ಜವಬ್ದಾರಿ ನೀಡಿದ ಕೆಪಿಸಿಸಿ ಅಧ್ಯಕ್ಷರು ಮತ್ತು ಎಲ್ಲಾ ಕಾರ್ಯಾಧ್ಯಕ್ಷರು ಹಾಗು ಮಾಜಿ ಸಂಸದ ಬಿ.ವಿ.ನಾಯಕರು,ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕರು ಹಾಗು ಕೆಪಿಸಿಸಿ ಎಸ್ಟಿ ವಿಭಾಗದ ಅಧ್ಯಕ್ಷರಾದ ಕೆ.ಪಿ.ಪಾಲಯ್ಯನವರಿಗೂ ಧನ್ಯವಾದ ಅರ್ಪಿಸುವುದಾಗಿ ರಮೇಶ ದೊರೆ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…