ಕಲಬುರಗಿ: 2018-19ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ www.sw.kar.nic.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ ಸಂಖ್ಯೆ, ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣಪತ್ರ, ಆಧಾರ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ 2019ರ ಡಿಸೆಂಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 60 ರಿಂದ 74.99 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 7000ರೂ. ಮತ್ತು ಶೇ. 75ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ15.000ರೂ.ಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.