ಬಿಸಿ ಬಿಸಿ ಸುದ್ದಿ

ಪಿ ಎಸ್ ಐ ನೇಮಕಾತಿ ವಯೋಮಿತಿ ಹೆಚ್ಚಳ : ಅಂಬಾರಾಯ ಅಷ್ಠಗಿ ಸ್ವಾಗತ

ಪಿ ಎಸ್ ಐ ನೇಮಕಾತಿಯ ವಯೋಮಿತಿಯನ್ನು ಹೆಚ್ಚಳಗೊಳಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಪೊಲೀಸ್ ಇಲಾಖೆಯ ಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ .
PSI ನೇಮಕಾತಿ ಸಂದರ್ಭದಲ್ಲಿ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಅವಕಾಶಕ್ಕಾಗಿ ವಯೋಮಿತಿ ಹೆಚ್ಚಳ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ 2019 ಅಗಸ್ಟ್ 21 ರಂದು ಶಾಸಕರು ಹಾಗೂ ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಪತ್ರ ಬರೆದು ಮನವಿ ಮಾಡಿದ್ದರು.

ಇಂದು PSI ನೇಮಕಾತಿಗೆ ಸಾಮಾನ್ಯ ವರ್ಗಕ್ಕೆ 28-30 ಮತ್ತು SC/ST ವರ್ಗದ ಅಭ್ಯರ್ಥಿಗಳಿಗೆ 30-32 ವರ್ಷ ವಯೋಮಿತಿ ನಿಗದಿಪಡಿಸಿ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿರುವುದನ್ನು ಅವರು ಅಭಿನಂದಿಸಿದ್ದಾರೆ.

ಇದರಿಂದ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ ಹಾಗೂ PSI ಆಗುವ ಮಹಾನ್ ಕನಸು ಈಡೇರಲು ರಾಜ್ಯ ಸರ್ಕಾರದ ಈ ಮಹತ್ವಪೂರ್ಣ ನಿರ್ಧಾರದಿಂದ ಅನುಕೂಲವಾಗಲಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago