ಬಿಸಿ ಬಿಸಿ ಸುದ್ದಿ

ಮಿಣಜಗಿಯವರಿಗೆ ವಯೋನಿವೃತ್ತಿ: ಸಮಾಜದ ಸನ್ಮಾನ

ಕಲಬುರಗಿ: ಇಂದು ಶ್ರೀ. ಗುರುಲಿಂಗಪ್ಪ ಎಸ್. ಮಿಣಜಗಿ ಯವರು ( ಮೂಲ ರುಕ್ಮಪುರ್ ಗ್ರಾಮ) ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕ ಹುದ್ದೆಯಿಂದ ನಿವೃತ್ತಿ ಯಾಗುತ್ತಿರುವ ದರಿಂದ ಅವರನ್ನು ಅವರ ಕಚೇರಿಗೆ ತೆರಳಿ ಅತಿ ಹೆಮ್ಮೆಯಿಂದ ಸಮಾಜದ ವತಿಯಿಂದ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಸನ್ಮಾನಿಸಲಾಯಿತು.

ರಾಜ್ಯ ಹಟಗಾರ ಸಮಾಜದ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಜೇನವೇರಿ ಹಾಗೂ ರಾಜ್ಯ ಹಟಗಾರ ವಕೀಲರ ಸಂಘದ ಸಂಚಾಲಕರು ಮತ್ತು ಹಿರಿಯ ವಕೀಲರಾದ ಶ್ರೀ. ಶಿವಲಿಂಗಪ್ಪ ಅಷ್ಟಗಿ, ಛಾಯಾಗ್ರಾಹಕ ರಾಜು ಕೋಸ್ಟಿ, ನ್ಯಾಯವಾದಿಗಳಾದ ಶ್ರೀ. ಚಂದ್ರಕಾಂತ ಮಾಲಗತ್ತಿ, ಶ್ರೀ. ಮನೋಹರ್ ಇತರರು ಇದ್ದರು. ಮೊದಲಿಗೆ ಶ್ರೀ. ಗುರುಲಿಂಗಪ್ಪ ಮಿಣಜಗಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತ ಇನ್ನು ಮುಂದೆ ಸಾಮಾಜಿಕ ಜೀವನದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಧರ್ಮಗುರು ದಾಸಿಮಯ್ಯನ ವರ ಕೃಪೆ ಬಯಸುತ್ತೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನು. ಗುಲ್ಬರ್ಗಾ ಹಟಗಾರ ಸಂಘದ ಕಾನೂನು ಸಲಹೆಗಾರ ಕಲಪ್ಪ ಸಕರಿ ಯವರು ಶರಣುಗೈದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago